ನವದೆಹಲಿ: ಜಿಡಿಪಿ ಕುಸಿದು ಉದ್ಯೋಗವಿಲ್ಲದೇ ಪರದಾಡುತ್ತಿರುವ ಸ್ಥಿತಿ ರಾಷ್ಟ್ರದ್ದಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರಿ ನೌಕರರಿಗೆ ಗಿಫ್ಟ್ ಒಂದನ್ನು ನೀಡುತ್ತಿದ್ದಾರಂತೆ. ಅದೇನು ಎಂಬುದನ್ನು ಹೇಳ್ತೀವಿ ಮುಂದೆ ಓದಿ. 
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲ ವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್ ಹಾಗೂ ಸಾರಿಗೆ ಭತ್ಯೆ ಲಭ್ಯವಾಗಿದೆ. ಇದೀಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.


 ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್  ನೀಡಲಾಗಿದೆ.ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320ರುಗೇರಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟು ತುಟ್ಟಿಭತ್ಯೆ ಸಿಗಲಿದೆ. 


ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದಾಗ ಡಿಎ ಹಾಗೂ ತುಟ್ಟಿ ದರ (ಡಿಆರ್) ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಿದೆ. ಈಗ ಡಿಆರ್ ಶೇ17ರಷ್ಟಾಗಲಿದೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆಯಿದೆ. 21,000ರು ಗಳಿಗೆ ನಿಗದಿ ಪಡಿಸಿ 3.00ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21ಸಾವಿರ ರು ನಿಂದ 26ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ. 


మరింత సమాచారం తెలుసుకోండి: