ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಚರ್ಚೆಯಾಗುತ್ತಿರುವ ವಿಷಯ ಟಿಪ್ಪು ಜಯಂತಿ. ಕಾಂಗ್ರೇಸ್ ಟಿಪ್ಪು ಜಯಂತಿ ಆಚರಣೆ ಮಾಡಲೇಬೇಕು ಎಂದು ವಾದಿಸಿದರೆ  ಇತ್ತ ಬಿಜೆಪಿ ಟಿಪ್ಪು ಜಯಂತಿ ಆಚರಣೆ ಅನ್ನು ರದ್ದು ಮಾಡಿದೆ.  ಇದೀಗ ಟಿಪ್ಪು ಕುರಿತ ಪಾಠವನ್ನು ಪಠ್ಯದಿಂದ ತೆಗೆದು ಹಾಕಲಾಗುವುದು ಎಂದು ಸಿಎಂ ಹೇಳಿಕೆ ನೀಡಿದ್ದು, ಪ್ರತಿಪಕ್ಷಗಳ ವಿರೋಧಕ್ಕೆ ಕಾರಣವಾಗಿದೆ.


 ಟಿಪ್ಪು ಸುಲ್ತಾನ್‌ ಇತಿಹಾಸವನ್ನು ಪಠ್ಯದಿಂದ ಕೈಬಿಡುವ ರಾಜ್ಯ ಸರ್ಕಾರದ ನಿಲುವಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಿಪ್ಪು ವಿಚಾರವನ್ನು ಪಠ್ಯದಿಂದ ಕೈಬಿಟ್ಟರೆ ಇತಿಹಾಸ ತಿರುಚಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಮಖಂಡಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸತ್ಯವನ್ನು ಬದಲಾಯಿಸಲು ಬಿಡಬಾರದು. ಇತಿಹಾಸ ತಿರುಚುವ ಕೆಲಸಕ್ಕೆ ಯಾರೂ ಹೋಗಬಾರದು. ಇತಿಹಾಸದಿಂದ ಮಕ್ಕಳು ಪಾಠ ಕಲಿಯಬೇಕು. ಟಿಪ್ಪು ಸುಲ್ತಾನ್‌ ಮತಾಂಧನಾಗಿದ್ದ ಎಂದು ಕರೆಯುವ ಬಿಜೆಪಿಯವರೇ ಮತಾಂಧರು ಎಂದು ಇದೇ ವೇಳೆ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 


ಟಿಪ್ಪು ಸುಲ್ತಾನ ಪಾಠವನ್ನು ಪಠ್ಯದಿಂದ ತೆಗೆಯುವುದು ಒಳ್ಳೆಯದಲ್ಲ. ಇದರಿಂದ ಇತಿಹಾಸ ತಿರುಚಿದಂತಾಗುವುದು. ಟಿಪ್ಪು ಸುಲ್ತಾನನು ಒಬ್ಬ ಸ್ವಾತಂತ್ರ್ಯ ಹೋರಾಟಗಾರ. ಇಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ರಾಜ್ಯ ಬಿಜೆಪಿ ಸರ್ಕಾರ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ ಪಾಠ ತೆಗೆದು ಹಾಕುವುದು ಅಲ್ಪಸಂಖ್ಯಾತರಿಗೆ ಅಷ್ಟೇ ಅಲ್ಲ ಸಮಸ್ತ ಕನ್ನಡ ನಾಡಿನ ಜನತೆಗೆ ಮಾಡಿದ ಅವಮಾನ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ ಎನ್‌ ಪಾಟೀಲ ತಿಳಿಸಿದರು.


ಸುದ್ದಿಗಾರರೊಂದಿಗೆ ಬುಧವಾರಈವಿಷಯ ಮಾತನಾಡಿದ ಅವರು, ಈ ಬಿಜೆಪಿ ಸರ್ಕಾರ ಅನಾವಶ್ಯಕ ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ.ಈಹಿಂದೆ ಹೊರಡಿಸಿರುವ 7ನೇ ತರಗತಿಯ ಪಬ್ಲಿಕ್‌ ಪರೀಕ್ಷೆ ನಡೆಸುವುದು ಅವೈಜ್ಞಾನಿಕ ಕ್ರಮವೆಂದು ಹಿಂದೆ ಇದನ್ನು ಜಾರಿಗೆ ತಂದಾಗ ಸರ್ಕಾರಕ್ಕೆ ಮನವರಿಕೆಯಾಗಿದೆ. ಇದನ್ನು ಮತ್ತೊಮ್ಮೆ ಜಾರಿಗೆ ತಂದಿದೆ. ಇದರ ಪರಿಣಾಮ ಆದರೆ 7ನೇ ವರ್ಗದಲ್ಲಿ ಅನುತ್ತೀರ್ಣವಾಗಿ ಶಾಲೆ ಬಿಡುವು ಮಕ್ಕಳ ಸಂಖ್ಯೆ ಹೆಚ್ಚುವುದಲ್ಲದೆ, ತಂದೆ ತಾಯಿಗಳಅವರನ್ನುಧನ ಕರು ಕಾಯಲು, ಕೂಲಿ ಕೆಲಸಕ್ಕೆ ಕಳುಹಿಸಲು ಅಥವಾ ಮನೆ ಕೆಲಸಗಳಲ್ಲಿ ಸಹಾಯಕ್ಕಾಗಿ ಬಳಸಿಕೊಂಡಿರುವ ಉದಾಹರಣೆ ಬಹಳಷ್ಟಿರುವಾಗ ಮತ್ತು ಇಂತಹ ಕ್ರಮ ಕೈಗೊಳ್ಳುವುದು ಅವೈಜ್ಞಾನಿಕ ಎಂದರು.


మరింత సమాచారం తెలుసుకోండి: