ಮುಂಬೈ:  ಬಿಜೆಪಿ ಶಿವಸೇನೆಯ ಮೈತ್ರಿಗೆ ಸ್ಪಷ್ಟ ಬಹುಮತ ಸಿಕ್ಕರು ನಾನೇ ಮುಖ್ಯಮಂತ್ರಿ ಆಗಬೇಕೆಂದು ಇಬ್ಬರು ಪಟ್ಟು ಹಿಡಿದು ಕುಳಿತಿದ್ದಾರೆ. ಶಿವಸೇನೆ ಕೊನೆಗೂ ಶರದ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿದ್ದರು  ಆದರೆ ಇದೀಗ ನೇರವಾಗಿ ಶರದ್ ಪವಾರ್ ಅವರೇ ನೋ ಎಂದು ಬಿಟ್ಟಿದ್ದಾರೆ. 


ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಬಾಹ್ಯ ಬೆಂಬಲದೊಂದಿಗೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನಾ ಮುಂದಾಗಿತ್ತು. ಇದಕ್ಕಾಗಿ ಶರದ್ ಪವಾರ್ ಅವರನ್ನು ಬುಧವಾರ ಕೂಡ ಭೇಟಿ ಮಾಡಿದ್ದ ಶಿವಸೇನಾ ನಾಯಕ ಸಂಜಯ್ ರಾವತ್ ಮಾತುಕತೆ ನಡೆಸಿದ್ದರು. ಆದರೆ ಎನ್‌ಡಿಎ ಮೈತ್ರಿಕೂಟದಿಂದ ಸಂಪೂರ್ಣ ಹೊರಬಂದರೆ ಮಾತ್ರ ಸರ್ಕಾರ ರಚನೆಗೆ ಬೆಂಬಲ ನೀಡುವುದಾಗಿ ಎನ್‌ಸಿಪಿ ಕಠಿಣ ಷರತ್ತು ಮುಂದಿಟ್ಟಿತ್ತು.


ಬುಧವಾರ ಸಂಜಯ್ ರಾವತ್ ಭೇಟಿಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಶರದ್ ಪವಾರ್, ರಾಜ್ಯದಲ್ಲಿ ಸರ್ಕಾರ ರಚನೆಗೆ ನಾವು ಶಿವಸೇನಾಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಚುನಾವಣೆಗೂ ಮುನ್ನ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ-ಶಿವಸೇನಾ ಸೇರಿ ಸರ್ಕಾರ ರಚಿಸಲಿ ಎಂದು ಹೇಳಿದರು. ಈ ಮೂಲಕ ಶಿವಸೇನಾ-ಎನ್‌ಸಿಪಿ ಮೈತ್ರಿ ಸರ್ಕಾರದ ಎಲ್ಲ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ.


'ನಾನು ಈ ಬಗ್ಗೆ ಹೇಳುವುದೇನೂ ಇಲ್ಲ. ಬಿಜೆಪಿ ಮತ್ತು ಶಿವಸೇನಾಗೆ ಜನರ ಬಹುಮತ ದೊರಕಿದೆ. ಅವರು ಶೀಘ್ರದಲ್ಲಿಯೇ ಸರ್ಕಾರ ರಚಿಸಬೇಕು. ಜನರು ನಮಗೆ ನೀಡಿರುವ ತೀರ್ಪಿನ ಪ್ರಕಾರ ನಾವು ವಿರೋಧಪಕ್ಷದ ಸ್ಥಾನದಲ್ಲಿ ಕೂರುತ್ತೇವೆ. ಜವಾಬ್ದಾರಿಯುತ ವಿರೋಧಪಕ್ಷವಾಗಿ ಕೆಲಸ ಮಾಡುತ್ತೇವೆ' ಎಂದಿದ್ದಾರೆ. ಜೊತೆಗೆ ಶಿವಸೇನಾ-ಎನ್‌ಸಿಪಿ ಸರ್ಕಾರ ರಚನೆಯ ಪ್ರಶ್ನೆ ಎಲ್ಲಿದೆ? ಬಿಜೆಪಿ ಮತ್ತು ಶಿವಸೇನಾ ಕಳೆದ 25 ವರ್ಷಗಳಿಂದ ಜತೆಯಾಗಿದ್ದಾರೆ. ಇಂದು ಅಥವಾ ನಾಳೆ ಅವರು ಮತ್ತೆ ಜತೆಯಾಗಿಯೇ ಬರುತ್ತಾರೆ' ಎಂದು ಒಡಕುಗಳು ಮೂಡಿದರೂ ಶಿವಸೇನಾ-ಬಿಜೆಪಿ ಮೈತ್ರಿ ನಡೆಯುತ್ತಲೇ ಇರುತ್ತದೆ. ಆದರೆ ಎನ್‌ಸಿಪಿ-ಶಿವಸೇನಾ ಮೈತ್ರಿ ಸಾಧ್ಯವೇ ಇಲ್ಲ ಎಂದರು. ಇಲ್ಲಿ ಇರುವುದು ಒಂದೇ ಒಂದು ಆಯ್ಕೆ. ಅದು ಬಿಜೆಪಿ-ಶಿವಸೇನಾ ಸೇರಿ ಸರ್ಕಾರ ರಚಿಸುವುದು. ಹೀಗಾಗಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವುದನ್ನು ಹೊರತುಪಡಿಸಿ ಸರ್ಕಾರ ರಚಿಸುವ ಬೇರೆ ಯಾವುದೇ ಆಯ್ಕೆಗಳು ಇಲ್ಲ' ಎಂದರು.


మరింత సమాచారం తెలుసుకోండి: