ನವದೆಹಲಿ: ಅಯೋಧ್ಯೆ ಬಾಬ್ರಿ ಮಸೀದಿ ಪ್ರಕರಣದ ಸುಪ್ರೀಂ ತೀರ್ಪು ನಮಗೆ ತೀವ್ರತರದ ಬೇಸರ ತರಿಸಿದೆ. ಸಮಾಧಾನ ತರಿಸಿಲ್ಲ ಎಂದು ಮುಸ್ಲಿಂ ವೈಯಕ್ತಿಕ ವಕೀಲರ ಮಂಡಳಿ ಯು ತಿಳಿಸಿದೆ. ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಆದ್ರೆ ಈ ತೀರ್ಪು ನಮಗೆ ಸಮಾಧಾನ ತಂದಿಲ್ಲ. 5 ಮಂದಿ ನ್ಯಾಯಾಧೀಶರು ನೀಡಿದ ಸಂವಿಧಾನ ಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಚಿಂತಿಸಲಾಗುತ್ತದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.


ತೀರ್ಪು ಪ್ರಕಟವಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನ್ನಿ ವಕ್ಫ್ ಬೋರ್ಡ್ ಪರ ವಕೀಲರಾದ ಜಫ್ರಯಾಬ್ ಗಿಲಾನಿ, ನ್ಯಾಯಾಧೀಶರು ಸಂಕ್ಷಿಪ್ತವಾಗಿ ತೀರ್ಪನ್ನು ಓದಿದ್ದರಿಂದ ಸಂಪೂರ್ಣ ಪ್ರತಿಯನ್ನು ಪಡೆದುಕೊಂಡು ಓದಿ ಮುಂದಿನ ನಿರ್ಧಾರವನ್ನು ಶೀಘ್ರದಲ್ಲಿಯೇ ತಿಳಿಸ ಲಾಗುವುದು. ಇದು ನ್ಯಾಯವಾದ ತೀರ್ಪು ಎಂದು ಒಪ್ಪಿಕೊಳ್ಳಲು ಆಗುತ್ತಿಲ್ಲ. ಷರಿಯಾ ಕಾನೂನಿನ ಪ್ರಕಾರ ಮಸೀದಿ ಯನ್ನು ಯಾರಿಗೂ ಕೊಡುಗೆಯಾಗಿ ನೀಡಲು ಬರಲ್ಲ. ಆದರೂ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ವಿವಾದಿತ ಜಮೀನಿನ ಹಕ್ಕು ರಾಮಲಲ್ಲಾಗೆ ನೀಡಿದೆ. ಸುಪ್ರೀಂಕೋರ್ಟ್ ಅದೇ ಮಸೀದಿಯಲ್ಲಿ ನಮಾಜ್ ಮಾಡಿದ್ದರು ಎಂಬುದನ್ನು ತನ್ನ ಆದೇಶದಲ್ಲಿ ಹೇಳುತ್ತದೆ ಎಂದು ಹೇಳಿದರು. 


ನ್ಯಾಯಾಲಯ ನೀಡಿದ ಐತಿಹಾಸಿಕ ತೀಪನ್ನು ಎಲ್ಲರೂ ಸ್ವಾಗತಿಸಬೇಕಿದೆ. ಎಲ್ಲರೂ ಶಾಂತಿ ಕಾಪಾಡಿಕೊಳ್ಳಬೇಕು. ಕಾನೂನಿನ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಭೆ ನಡೆಸಲಾಗುತ್ತದೆ. ವಿವಾದಿತ ಪ್ರದೇಶದಲ್ಲಿ ನಮಾಜ್ ಮಾಡಲಾಗಿದೆ ಎಂದು ಹೇಳಿದರೂ ಆ ಸ್ಥಳವನ್ನು ಬೇರೆಯವರಿಗೆ ನೀಡಲಾಗಿದೆ. ತೀರ್ಪಿನ ಕೆಲ ಅಂಶಗಳ ಬಗ್ಗೆ ಮಾತ್ರ ನಮಗೆ ಅಸಮಾಧಾನವಿದೆ. ಅದೇ ಸ್ಥಳದಲ್ಲಿ ಹಿಂದೂಗಳು ಪೂಜೆ ಮಾಡಿರುವ ಸಾಕ್ಷ್ಯವನ್ನು ಒಪ್ಪಿಕೊಳ್ಳುವ ಸುಪ್ರೀಂಕೋರ್ಟ್ ನಮಾಜ್ ಮಾಡಿರುವುದನ್ನು ಒಪ್ಪಿಕೊಂಡಿಲ್ಲ. ಈ ರೀತಿಯ ಕೆಲವೊಂದು ಅಂಶಗಳ ಬಗ್ಗೆ ಸಣ್ಣ ಗೊಂದಲಗಳಿವೆ. ತೀರ್ಪಿನ ಪ್ರತಿಯನ್ನು ಓದಿದಾಗಲೇ ಎಲ್ಲವೂ ಬಗೆಹರಿಯಲಿದೆ ಎಂದು ತಿಳಿಸಿದರು. ಎರಡು ಮೂರು ದಿನಗಳಲ್ಲಿ ತೀರ್ಪಿನ ಎಲ್ಲ ಅಂಶಗಳನ್ನು ಕೂಲಂ ಕುಶವಾಗಿ ಓದಿ, ಸಭೆ ನಡೆಸಿ ಮುಂದಿನ ತೀರ್ಮಾನಕ್ಕೆ ಬರಲಾಗುತ್ತದೆ ಎಂದು ತಿಳಿಸಿದರು.


మరింత సమాచారం తెలుసుకోండి: