ನವದೆಹಲಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ಅನರ್ಹ ಶಾಸಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪೀಠ ಬುಧವಾರ ತೀರ್ಪನ್ನು ಪ್ರಕಟಿಸಿದ್ದು, ಸ್ಪೀಕರ್ ಆದೇಶವನ್ನು ಎತ್ತಿಹಿಡಿದರೂ ಸಹ ಅನರ್ಹರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ. 


ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ತೀರ್ಪು ನೀಡಿದೆ. ತಮ್ಮನ್ನು ಶಾಸಕ ಸ್ಥಾನದಿಂದ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಕುರಿತ ಅಂತಿಮ ತೀರ್ಪನ್ನು ಪ್ರಕಟಿಸಿದೆ.ಅನರ್ಹತೆಗೆ ವಿಧಿಸಿರುವ ಕಾಲಾವಧಿ ಸರಿಯಲ್ಲ. ವಿಧಾನಸಭೆ ಅಂತ್ಯದವರೆಗೆ ಅನರ್ಹತೆ ಸರಿಯಲ್ಲ. ಸ್ಪೀಕರ್ ಕೂಡಾ ಸಂವಿಧಾನ ವಿರೋಧಿ ತೀರ್ಪು ನೀಡಬಾರದು. ಕುದುರೆ ವ್ಯಾಪಾರ ಕೂಡ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಹೇಳಿದೆ. ತಮ್ಮನ್ನು ಶಾಸಕ ಸ್ಥಾನದಿಂದ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಕುರಿತ ಅಂತಿಮ ತೀರ್ಪನ್ನು ಪ್ರಕಟಿಸಿದೆ.


ಸಂಸದೀಯ ವ್ಯವಸ್ಥೆಯಲ್ಲಿ ನೈತಿಕತೆ ಮುಖ್ಯ. ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷ ಎರಡಕ್ಕೂ ನೈತಿಕತೆ ಇರಬೇಕು. ಪ್ರಕರಣದ ವಾದ-ಪ್ರತಿವಾದದ ಬಗ್ಗೆ ಸುಪ್ರೀಂ ಪೀಠದ ಜಡ್ಜ್ ಎನ್ ವಿ ರಮಣ್ ವಿವರಿಸಿದರು.ಅನರ್ಹ ಶಾಸಕರ ನಡೆಯನ್ನು ಪ್ರೋತ್ಸಾಹಿಸಲು ಸಾಧ್ಯವಿಲ್ಲ ಎಂದು ಪೀಠ ತೀರ್ಪಿನಲ್ಲಿ ಉಲ್ಲೇಖಿಸಿದೆ. ಎರಡು ವಿಚಾರಣೆ ಬೇಡ ಎಂದು ನಾವೇ ವಿಚಾರಣೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. 


ಅದು ಯಾವಾಗ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡುತ್ತೆ  ಎಂದು ಹಣೆ ಮೇಲೆ ಕೈಯೊತ್ತು  ಕುಳಿತಿದ್ದ ಅನರ್ಹರು ಇದೀಗ ಸುಪ್ರೀಂ ಕೋರ್ಟ್ ತೀರ್ಪು ಕೇಳಿ ಕೊಂಚ ಸಮಾಧಾನ ವಾಗಿದ್ದಾರೆ. ಚುನಾವಣೆಗೆ ಸ್ಪರ್ದಿಸಬಹುದು ಎಂದು ತೀರ್ಪು ಬರುತ್ತಿದ್ದಂತೆಯೇ ಅನರ್ಹರ ಮುಖದಲ್ಲಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ಇದರಿಂದ ಮೂಲ ಬಿಜೆಪಿಗರಲ್ಲಿ ಅಸಮಾಧಾನ ಮೂಡಿದ್ದು, ಮುಂದೇನಾಗುತ್ತದೆ ಎಂಬುದು ಕಾದು ನೋಡಬೇಕಾಗಿದೆ.


మరింత సమాచారం తెలుసుకోండి: