ನವದೆಹಲಿ: ಎಐಸಿಸಿ ಮಾಜಿ ಅದ್ಯಕ್ಷ ರಾಹುಲ್ ಗಾಂಧಿ ಇದೀಗ ಸುಪ್ರೀಂ ಕೋರ್ಟ್ ನಿಂದ ತರಾಟೆಗೆ ಒಳಗಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರಮೋದಿ ಅವರನ್ನು “ಚೌಕಿ ದಾರ್ ಚೋರ್ ಹೈ” ಎಂದು ಜರಿದು ಆ ನಂತರ ಕ್ಷಮೆಯಾಚಿಸಿದ್ದ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸುಪ್ರೀಂಕೋರ್ಟ್ ಕೈ ಬಿಟ್ಟಿದೆ.


ರಾಹುಲ್‌ಗಾಂಧಿ 22 ಪುಟಗಳ ಕ್ಷಮಾಪಣೆ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಲೋಕಸಭಾ ಚುನಾವಣೆ ಪ್ರಚಾರದ ಸಮಯದಲ್ಲಾದ ಎಡವಟ್ಟು ಎನ್ನುವುದನ್ನು ಮನವರಿಕೆ ಮಾಡಿಕೊಟ್ಟು ವಿಷಾದಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಅರ್ಜಿಯನ್ನು ಕೈಬಿಟ್ಟಿದೆ ಎಂದು ತಿಳಿದುಬಂದಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಬೇಕು. ತಮ್ಮ ಹೇಳಿಕೆಯನ್ನು ಸುಪ್ರೀಂಕೋರ್ಟ್ ಹೇಳಿಕೆ ಎಂದು ರಾಹುಲ್‌ಗಾಂಧಿ ಬಿಂಬಿಸಿದ್ದಿದ್ದು ದುರದುಷ್ಟಕರ ಎಂದು ಸುಪ್ರೀಂಕೋರ್ಟ್ ರಾಹುಲ್‌ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.


ನೀವು ದೊಡ್ಡ ಸ್ತಾನದಲ್ಲಿದ್ದೀರಿ ಎಂದ ತಕ್ಷಣಕ್ಕೆ ಹೇಗೆ ಬೇಕು ಹಾಗೆ ಹೇಳಿಕೆ ಮಾಡುವಂತಿಲ್ಲ. ನ್ಯಾಯಾಂಗದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು, ಅಲ್ಲದೆ ನಾಲಿಗೆಯನ್ನು ಬಿಗಿಹಿಡಿದು ಮಾತನಾಡಬೇಕು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ. ಭವಿಷ್ಯದಲ್ಲಿ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸುವಂತೆಯೂ ಸುಪ್ರೀಂಕೋರ್ಟ್ ಸೂಚನೆ ನೀಡಿ ರಾಹುಲ್‌ಗಾಂಧಿ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಕೈ ಬಿಟ್ಟಿದೆ.


ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರಮೋದಿ ಅವರನ್ನು ಟೀಕಿಸುವ ಭರದಲ್ಲಿ ಚೌಕಿ ದಾರ್ ಚೋರ್ ಹೈ ಎಂದು ಜರಿದಿದ್ದರು.  ಆ ಬಳಿಕ ಆಕ್ಷೇಪ ವ್ಯಕ್ತವಾಗಿದ್ದರಿಂದ ತಮ್ಮ ಹೇಳಿಕೆಗೆ ಸಮಜಾಯಿಷಿ ನೀಡಿ ಕ್ಷಮೆ ಕೋರಿದ್ದರು. ಆ ಕ್ಷಣದಲ್ಲಿ ಚೌಕಿದಾರ್ ಚೋರ್ ಹೈ ಎನ್ನುವ ಹೇಳಿಕೆ ಭಾರೀ ವೈರಲ್ ಆಗಿತ್ತು.
ಪ್ರತಿಪಕ್ಷದ ವರೆಲ್ಲರು ಸೇರಿ ರಾಹುಲ್ ಹೇಳಿಕೆಗೆ ಪುಷ್ಠಿ ನೀಡುವಂತೆ ಚೌಕಿದಾರ್ ಚೋರ್ ಚೌಕಿದಾರ್ ಚೋರ್ ಹೈ ಎಂದು ಕಾಮೆಂಟ್ ಮಾಡುತ್ತಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಹ ಭಾರೀ ವೈರಲ್ ಆಗಿದ್ದ ಡೈಲಾಗ್ ಟಿಕ್ ಟಾಕ್ ನಲ್ಲಿಯೂ ಸದ್ದು ಮಾಡಿತ್ತು.


మరింత సమాచారం తెలుసుకోండి: