ಹಿರೇಕೆರೂರು: ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅವರು ಅರ್ಹರಾಗಿದ್ದಾರೆ. ಅಭಿವೃದ್ಧಿ ಪರ ಸರ್ಕಾರ ಬಿಜೆಪಿ ಬೆಂಬಲಿಸಿದ್ದಾರೆ. ಅವರನ್ನು ಅನರ್ಹರೆಂದು ಕರೆಯಬೇಡಿ. ಅವರು ಅರ್ಹರು ಎಂದು 15 ಕ್ಷೇತ್ರಗಳಲ್ಲಿ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ರಚಿಸಲು ಕಾರಣೀಕರ್ತರಾದ ಮಾಜಿ ಶಾಸಕರನ್ನು ಬಿ.ಎಸ್.ವೈ ಹೊಗಳಿದ್ದಾರೆ.
 
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರ ಪ್ರಭುಗಳು 25 ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿದ್ದಾರೆ. ಈಗ ನಡೆಯುತ್ತಿರುವ ಉಪಚುನಾವಣೆಯಲ್ಲಿ15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬರುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆತ್ಮವಿಶ್ವಾಸದ ನುಡಿಗಳನ್ನಾಡಿದ್ದಾರೆ. 
 
ಹಿರೆಕೆರೂರಿನ ರಟ್ಟೀಹಳ್ಳಿಯಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್‌ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್‌ನಲ್ಲಿ ಸಿಎಂ ಈ ರೀತಿಯಾಗಿ ವಿಶ್ವಾಸ ವ್ಯಕ್ತಪಡಿಸಿದರು. ‘ಲೋಕಸಭೆಗೆ ಚುನಾವಣೆ ನಡೆದ ವೇಳೆ 22 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದು ಹೇಳಿದ್ದೆ. ಆಗ ಮಾಧ್ಯಮ ಸೇರಿದಂತೆ ಕಾಂಗ್ರೆಸ್‌, ಜೆಡಿಎಸ್‌ನವರು ಅಪಹಾಸ್ಯ ಮಾಡಿದ್ದರು. ಆದರೆ, 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರು ಗೆದ್ದಿದ್ದಾರೆ. ಸುಮಲತಾ ಪಕ್ಷೇತರರಾಗಿ ಆಯ್ಕೆಯಾಗಿದ್ದಾರೆ.
 
ಕಾಂಗ್ರೆಸ್‌ ಒಂದು, ಜೆಡಿಎಸ್‌ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿವೆ’ ಎಂದು ಬಿಎಸ್‌ವೈ ನೆನಪಿಸಿಕೊಂಡರು. 'ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಯು.ಬಿ.ಬಣಕಾರ, ಬಿ.ಸಿ.ಪಾಟೀಲ್‌ ಒಂದಾಗಿದ್ದಾರೆ. ಅವರಿಬ್ಬರ ತ್ಯಾಗ ಅತ್ಯಂತ ಮಹತ್ವದ್ದಾಗಿದೆ. ಯು.ಬಿ.ಬಣಕಾರ ಇರುವುದರಿಂದ ನಮಗೆ ಯಾವುದೇ ಆತಂಕ ಇಲ್ಲ. ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್‌ ಅತಿ ಹೆಚ್ಚು ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ’ ಎಂದು ಯಡಿಯೂರಪ್ಪ ಭವಿಷ್ಯ ನುಡಿದರು. 
 
ಸಮ್ಮಿಶ್ರ ಸರಕಾರ ಸರಿಯಿಲ್ಲ ಎಂದು 17 ಶಾಸಕರು ತಮ್ಮ ಸ್ಥಾನಗಳಿಗೆ ಸ್ವಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಅವರು ಅನರ್ಹರಲ್ಲ. ಸ್ಪರ್ಧೆ ಮಾಡಲು ಸುಪ್ರೀಂ ಕೋರ್ಟ್‌ ಅವರಿಗೆ ಅನುಮತಿ ನೀಡಿದೆ. ಉಪಚುನಾವಣೆ ನಡೆಯುವ ಎಲ್ಲಾ15 ಕ್ಷೇತ್ರಗಳನ್ನು ಮಾದರಿ ಕ್ಷೇತ್ರಗಳನ್ನಾಗಿ ಅಭಿವೃದ್ದಿ ಪಡಿಸುವುದಾಗಿ ಭರವಸೆ ನೀಡಿದ್ದೇನೆ. ರಾಜ್ಯದಲ್ಲಿ ರೈತರು, ಮಹಿಳೆಯರು ಹಾಗೂ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು. ಅತಿವೃಷ್ಟಿಗೆ ಹೆಚ್ಚಿನ ಅನುದಾನ ನೀಡಲು ಬದ್ಧನಾಗಿದ್ದೇನೆ. ರೈತನ ಮಗನಾದ ನನಗೆ ರೈತರ ನೋವುಗಳು ಗೊತ್ತು ಎಂದು ಯಡಿಯೂರಪ್ಪ ತಿಳಿಸಿದರು.

మరింత సమాచారం తెలుసుకోండి: