ಬೆಂಗಳೂರು: ಪ್ರಸ್ತುತವಿದೀಗ ರಾಜ್ಯ ಉಪ ಚುನಾವಣೆ ಫಲಿತಾಂಶ ಯಡಿಯೂರಪ್ಪ ನವರ ಪರವಾಗಿ ಬಂದಿದ್ದು ರಾಜ್ಯ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಸರ್ಕಾರ ಸೇಫ್ ಆಗುತಿದ್ದಂತೆಯೇ ಮುಖ್ಯಮಂತ್ರಿ ಯಡಿಯೂರಪ್ಪ ನವರು ಈ ಹಿಂದಿನ ಸಮ್ಮಿಶ್ರ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಒಂದೊಂದಾಗಿಷೇ ನಿಲ್ಲಿಸುತ್ತಾ ಅನುದಾನಗಳನ್ನು ಕಡಿತಗೊಳಿಸುತ್ತಿದ್ದಾರೆ. ಇದರ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಫುಲ್ ಗರಂ ಆಗಿದ್ದಾರೆ. 
 
ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರಾಗಿರುವ ಯೋಜನೆಗಳನ್ನು ಸಿಎಂ ಬಿಎಸ್‌ವೈ ಸರಕಾರ ತಡೆ ಹಿಡಿಯುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. 2018 ಎಚ್‌ಡಿಕೆ ಸರಕಾರದ ಅವಧಿಯಲ್ಲಿ ರಾಮನಗರ ಜಿಲ್ಲೆಗೆ ವಿವಿಧ ಅಭಿವೃದ್ದಿ ಯೋಜನೆಗಳನ್ನು ಮಂಜೂರು ಮಾಡಲಾಗಿತ್ತು. ಆದರೆ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರ ಜಿಲ್ಲೆ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ.
 
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಬಿ.ಎಸ್‌ ಯಡಿಯೂರಪ್ಪ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ ಎಚ್‌ಡಿ ಕುಮಾರಸ್ವಾಮಿ ಮಾಡಿದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ.
ಈ ಕುರಿತಾಗಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಯೋಜನೆಗಳ ಮಂಜೂರು ಹಾಗೂ ಅನುದಾನ ವಿಚಾರದಲ್ಲಿ  ತಾರತಮ್ಯ ಮಾಡಲಿಲ್ಲ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೆ ನೆರಲು ನೀಡಲಾಗಿದೆ. ನಮಗೆ ರಾಜ್ಯದ ಅಭಿವೃದ್ದಿಯಷ್ಟೇ ಮುಖ್ಯ ಎಂದಿದ್ದಾರೆ. ಈ ವಿಚಾರ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
 
ಇತ್ತೀಚೆಗಷ್ಟೇ ಕನಕಪುರದ ಮೆಡಿಕಲ್ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದಾದ ಬಳಿಕ ಎಲೆಕ್ಷನ್ ನಲ್ಲಿ ಮುಖ್ಯಮಂತ್ರಿ ಬ್ಯೂಸಿ ಆಗಿದ್ದರು. ಬಳಿಕ ಇದೀಗ ರಾಮನಗರ ಜಿಲ್ಲೆಗೆ ನೀಡಿದ ಕೋಟ್ಯಾಂತರ ರೂಪಾಯಿಗಳ ಯೋಜನೆಗಳನ್ನು ಒಂದೊಂದಾಗಿ ನಿಲ್ಲಿಸುತ್ತಾ ಬರುತ್ತಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗರಂ ಆಗಿದ್ದು, ಮುಂದೆ ಈ ವಿಚಾರ ಯಾವ ಹಂತಕ್ಕೇರಲಿದೆ ಎಂಬುದು ಕಾದುನೋಡಬೇಕಾಗಿದೆ.

మరింత సమాచారం తెలుసుకోండి: