ಉಡುಪಿ: ಕಳೆದ 3 ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯವು ಮತ್ತಷ್ಟು ಗಂಭೀರ ವಾಗಿದ್ದು, ಇಂದು ಅವರನ್ನು ಮಠಕ್ಕೆ ಶಿಫ್ಟ್ ಮಾಡಲಾಗುತ್ತದೆ. 
 
ಪೇಜಾವರ ಶ್ರೀಗಳ ಆರೋಗ್ಯ ಗಂಭೀರವಾಗಿ ರುವ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಮಠದ ಕಿರಿಯ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀಗಳ ಆರೋಗ್ಯ ಕ್ಷೀಣವಾಗುತ್ತಿದ್ದು, ಚೇತರಿಕೆಯ ಯಾವ ಲಕ್ಷಣ ಕಾಣುತ್ತಿಲ್ಲ. ಶ್ರೀಗಳನ್ನು ಮಠಕ್ಕೆ ಸ್ಥಳಾಂತರ ಮಾಡು ತ್ತೇವೆ. ಶ್ರೀಗಳ ಅಂತಿಮ ಆಸೆಯೂ ಅದೇ ಆಗಿತ್ತು. ವೈದ್ಯರನ್ನೊಳ ಗೊಂಡ ವೆಂಟಿಲೇಟರ್ ವ್ಯವಸ್ಥೆ ಮಠದಲ್ಲೇ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆ ಯವರ ಕೆಲ ಕಾರ್ಯ ವಿಧಾನಗಳು ಬಾಕಿಯಿದೆ. ತಯಾರಿ ನೋಡಿಕೊಂಡು ಮುಂದಿನ ಕ್ರಮ ಮಾಡುತ್ತೇವೆ. ಪೇಜಾವರ ಮಠಕ್ಕೆ ಭಕ್ತರ ಭೇಟಿ ಸದ್ಯ ಬೇಡ. ಎಲ್ಲರೂ ಇದ್ದಲ್ಲಿಂದ ಗುರುಗಳ ಆರೋಗ್ಯಕ್ಕಾಗಿ ಪ್ರಾರ್ಥಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪೂರ್ಣ ಸಹಕಾರ ಸಿಗುವ ವಿಶ್ವಾಸವಿದೆ ಎಂದು ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
 
ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಕಳೆದ ರಾತ್ರಿ ಎಂಆರ್‍ಐ ಸ್ಕ್ಯಾನ್‍ಗೆ ಒಳಪಡಿಸಲಾಗಿದೆ. ಕಳೆದ ಒಂಬತ್ತು ದಿನಗಳಿಂದ ಬೆಂಗಳೂರಿನಿಂದ ಆಗಮಿಸಿರುವ ಇಬ್ಬರು ತಜ್ಞ ವೈದ್ಯರು ಮತ್ತು ಕೆಎಂಸಿಯ ಏಳು ವೈದ್ಯರ ತಂಡ ಪೇಜಾವರ ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದಿಂದ ದಿನಕ್ಕೆ ಆರೋಗ್ಯ ಕ್ಷೀಣಿಸುತ್ತಲೇ ಇದ್ದು, ಎರಡು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದು, ಭಕ್ತರಲ್ಲಿ ಇದೀಗ ದುಃಖವನ್ನು ಹೆಚ್ಚಿಸಿದೆ.
 
ಮುಖ್ಯ ಮಂತ್ರಿ ಯಡಿಯೂರಪ್ಪ ಅವರು ಮಾತನಾಡಿ, ಶ್ರೀಗಳ ಆರೋಗ್ಯದಲ್ಲಿ ಗಂಭೀರವಾಗಿದೆ. ಆರೋಗ್ಯದಲ್ಲಿ ಕಾಪಾಡುವುದು ಇನ್ನೇನಿದ್ದರೂ ಶ್ರೀಕೃಷ್ಣನಿಗೆ ಬಿಟ್ಟಿದ್ದು ಎಂದು ದೇವರ ಮೇಲೆ ಭಾರ ಹಾಕಿದರು. ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯವು ಸುಧಾರಿಸಲಿ ಇನ್ನಷ್ಟು ಬದುಕಲಿ ಎಂದು ಮಠದಲ್ಲಿ, ಹಾಗೂ ಅವರ ಭಕ್ತರು ನಾನಾ ಕಡೆ ಗಳಲ್ಲಿ ಪೂಜೆ, ಹೋಮ ಹವನ ಗಳನ್ನು ಮಾಡುತ್ತಿದ್ದಾರೆ.

మరింత సమాచారం తెలుసుకోండి: