ಬೆಂಗಳೂರು: ಸಂಪುಟ ವಿಸ್ತರಣೆ ಗೊಂದಲದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಅದೇ ರಾಗ. ಹೌದು, ಏನದು ಗೊತ್ತಾ! ನೀವ್ ಹೇಳ್ತೀವಿ ಕೇಳಿ. 
 
ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡ ನೂತನ ಶಾಸಕರ ‘ತ್ಯಾಗ’ವನ್ನು ಸಿಎಂ ಬಿಎಸ್‌ ಯಡಿಯೂರಪ್ಪ  ನೆನೆಸಿಕೊಂಡಿದ್ದಾರೆ. ಹೌದು, ಎಲ್ಲಾ ಕಡೇ ಇದೇ ಮಾತನ್ನು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಈ ಮೂಲಕ ಸಚಿವ ಸ್ಥಾನ ಆಕಾಂಕ್ಷಿಗಳಾದ ಮೂಲ ಬಿಜೆಪಿಗರಿಗೆ ಪರೋಕ್ಷ ಎಚ್ಚರಿಕೆಯನ್ನು ನೀಡಿದ್ದಾರೆ. 
 
ಗುರುವಾರ ಬೆಂಗಳೂರಿನಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್‌ವೈ, ಮೈತ್ರಿ ಸರ್ಕಾರದಲ್ಲಿ ಮಂತ್ರಿಗಳಾಗಿದ್ದವರು ಹಾಗೂ ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದಾರೆ, ಅವರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಹೊಸದಾಗಿ ಬಿಜೆಪಿ ಸೇರ್ಪಡೆ ಆದವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ.  ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಅಭಿನಂದಿಸಿದ ಬಿಎಸ್‌ವೈ , ಕಟೀಲ್ ಅವರನ್ನ ಸರ್ವಾನುಮತದಿಂದ ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.
 
ಇಂದಿನಿಂದ ಮೂರು ವರ್ಷಗಳ ಕಾಲ ಬಿಜೆಪಿ ಪಕ್ಷವನ್ನ ಕಟ್ಟುವ ಜವಾಬ್ದಾರಿ ಅವರ ಮೇಲಿದೆ, ಬಿಜೆಪಿ ಒಂದರಲ್ಲಿ ಮಾತ್ರ ಈ ರೀತಿ ಕಾರ್ಯಕರ್ತರ ಅಭಿಪ್ರಾಯ ಪಡೆದು ಪಕ್ಷದ ಅಧ್ಯಕ್ಷರನ್ನ ಆಯ್ಕೆ ಮಾಡಲಾಗುತ್ತದೆ ಎಂದಿದ್ದಾರೆ.  ರಾಜ್ಯಾಧ್ಯಕ್ಷರಾಗಿರುವ ಕಟೀಲ್ ಅವರು ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿದ್ದಾರೆ, ಕಾರ್ಯಕರ್ತರನ್ನ ಹುರಿದುಂಬಿಸೋ ಕೆಲಸವನ್ನು ಮಾಡುತ್ತಿದ್ದಾರೆ. ಸಂಘಟನೆ ಬಲ ಪಡೆಸುವುದರ ಜೊತೆಗೆ ಅಭಿವೃದ್ಧಿ ಮಾಡೋದಕ್ಕೆ ಎಲ್ಲರೂ ಕಟೀಲ್ ಅವರಿಗೆ ಸಹಕಾರ ನೀಡಬೇಕು ಎಂದು ಸಿಎಂ ಕೇಳಿಕೊಂಡಿದ್ದಾರೆ.
 
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರೋ ಸಂದರ್ಭದಲ್ಲಿ ಕರ್ನಾಟಕವನ್ನ ಮಾದರಿ ರಾಜ್ಯ ಮಾಡುವ ನಿಟ್ಟಿನಲ್ಲಿ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕೊಡುವುದರ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಮಾರ್ಚ್ ತಿಂಗಳಲ್ಲಿ ಮಂಡನೆಯಾಗಲಿರುವ ಬಜೆಟ್‌ನಲ್ಲಿ ಎಲ್ಲರ ಅಭಿಪ್ರಾಯ ಪಡೆದು ಉತ್ತಮ ಆಯವ್ಯಯ ನೀಡುವ ಪ್ರಯತ್ನ ನಡೆಯುತ್ತಿದೆ ಎಂದರು. ಮಾರ್ಚ್ 5ರಂದು ಬಜೆಟ್ ಮಂಡಿಸಲಾಗುವುದು.

మరింత సమాచారం తెలుసుకోండి: