ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟ ಪ್ರಕರಣ ಇದೀಗ ಮಗದೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಕುಮಾರಸ್ವಾಮಿ, ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಯು.ಟಿ.ಖಾದರ್‌ ಸೇರಿ ಅನೇಕರು ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ವಿರುದ್ಧ, ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಹೌದು, ದಿನೇಶ್ ಗುಂಡೂರಾವ್ ಹೇಳಿದ್ದಾದರು ಏನು ಗೊತ್ತಾ!? 

 

ಮಂಗಳೂರು ವಿಮಾನ ನಿಲ್ದಾಣ ಬಾಂಬ್‌ ಪ್ರಕರಣದಲ್ಲಿ ಆರೋಪಿಯೇ ಬಂದು ಪೊಲೀಸರಿಗೆ ಶರಣಾಗಿದ್ದಾರೆ. ಆದರೆ, ಈ ಸುದ್ದಿ ಬಿಜೆಪಿಯವರಿಗೆ ಸಂತೋಷ ತಂದಿಲ್ಲ. ಆದಿತ್ಯರಾವ್‌ ಹೆಸರಿನ ಜಾಗದಲ್ಲಿ ಬೇರೆಯವರು ಇದ್ದಿದ್ದರೆ ಬಿಜೆಪಿ ನಾಯಕರ ಅಭಿಪ್ರಾಯ ಬೇರೆಯಾಗಿರುತ್ತಿತ್ತು. ಆದರೆ, 'ರಾವ್‌' ಹೆಸರು ಬಿಜೆಪಿ ಭಕ್ತರಿಗೆ ಅಸಂತೋಷ ತಂದಿದೆ'' ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೌದು, ಕಲಬುರ್ಗಿ ಗೌರಿ ಲಂಕೇಶ್‌ ಹತ್ಯೆ ಪ್ರಕರಣಗಳಲ್ಲೂ ಇದೇ ಆಗಿದೆ. ಈ ಪ್ರಕರಣಗಳಲ್ಲಿ ಮುಸ್ಲಿಮರು ಆರೋಪಿ ಸ್ಥಾನದಲ್ಲಿದ್ದರೆ ದೇಶದ್ರೋಹಿಗಳು ಎಂದು ಬಿಜೆಪಿಯವರು ಬಾಯಿ ಬಡಿದುಕೊಳ್ಳುತ್ತಿದ್ದರು ಎಂದು ಗುಡುಗಿ ಟೀಕಿಸಿದ್ದಾರೆ. ಪೂರ್ವಗ್ರಹ ಹೊಂದಿರುವ ಸಂಘ ಪರಿವಾರದ ನಾಯಕರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾನ್ಯ ಅಪರಾಧ ಪ್ರಕರಣಗಳಿಗೂ ಕೋಮುಬಣ್ಣ ಬಳಿಯುತ್ತಿದ್ದಾರೆ. ಇದೇ ಅಲ್ಲಿನ ಶಾಂತಿ ಕದಡಲು ಕಾರಣ ಎಂದು ದೂರಿದ್ದಾರೆ.

 

ಜೊತೆಗೆ, ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿರುವ ಆರೋಪಿ ಆದಿತ್ಯರಾವ್‌ ಎಂಬಾತನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು. ಆತನನ್ನು ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು'' ಎಂದು ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವರು ಸೇರಿ ಬಿಜೆಪಿ ಮುಖಂಡರು ನೀಡಿದ್ದ ಹೇಳಿಕೆ ಬೇಜವಾಬ್ದಾರಿತನದ್ದು. ಕೇರಳ ಸಂಪರ್ಕ, ಇಸ್ಲಾಮಿಕ್‌ ಉಗ್ರ, ಪೌರತ್ವ ವಿರೋಧಿಗಳ ಕೃತ್ಯ ಎಂದೆಲ್ಲ ಬೊಬ್ಬ ಹಾಕಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದರು.


ಕುಮಾರಸ್ವಾಮಿ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರಂತೆ ಮಾತನಾಡುತ್ತಿದ್ದಾರೆ:  ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಕುಮಾರಸ್ವಾಮಿ ಸಹ ಬಾಂಬ್‌ ಸ್ಫೋಟ ಅಣಕು ಪ್ರದರ್ಶನ ಎಂದು ಪೊಲೀಸರ ಬಗ್ಗೆ ವ್ಯಂಗ್ಯವಾಡಿ ಗುಡುಗಿದ್ದಾರೆ.

మరింత సమాచారం తెలుసుకోండి: