ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಬುಧವಾರ 78 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಸಿಎಂ ಬಿ.ಎಸ್.​ವೈ ಅವರು ತಮ್ಮ ಟ್ವೀಟರ್​ ಮೂಲಕವಾಗಿ ತಮ್ಮ ಅಭಿಮಾನಿಗಳಿ ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಏನೆಂದು ಗೊತ್ತಾ!? ಮುಂದೆ ಓದಿ... 
 
ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದೆಂದು ಕಾರ್ಯಕರ್ತರಿಗೆ, ಅಭಿಮಾನಿಗಳಲ್ಲಿ ಸಿಎಂ ಮನವಿ ಮಾಡಿದ್ದಾರೆ. ಹೌದು, ಸರಳ ಸಜ್ಜನ ರೈತರ, ಬಡವರ ಬಂಧು ಎಂದೇ ಖ್ಯಾತಿ ಪಡೆದಿರುವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಇದೀಗ ಅವರು ಮತ್ತೊಮ್ಮೆ ಸರಳತೆಯಿಂದಲೇ ಬರ್ತಡೇ ಯನ್ನು ಆಚರಿಸಿಕೊಳ್ಳುತ್ತಿದ್ದಾರೆ. 
 
ಬುಧವಾರ ಟ್ವೀಟ್​ ಮಾಡಿದ ಅವರು, ನಾಡಿನ ಸಮಸ್ತ ಜನತೆ, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಬಂಧುಗಳಲ್ಲಿ ಎಲ್ಲರೂ ನಾಳೆಗೆ ಸಹಜವಾಗಿ ಬಂದು ಆಶೀರ್ವದಿಸಿ, ಯಾವುದೇ ಹೂಗುಚ್ಛ ತರಬೇಡಿ ಎಂದು ಸಿಎಂ ಹೇಳಿದ್ದಾರೆ. ಅಂತೆಯೇ, ಎಲ್ಲರ ಹಾರೈಕೆ, ಹರಕೆ ಹಾಗೂ ಆಶಿರ್ವಾದ ಗಳಿಂದ. ನಿಮ್ಮಲ್ಲರ ಸೇವೆ ಮಾಡುವ ಸ್ಥಾನದ ಸೌಭಾಗ್ಯ ವನ್ನು ನಾನು ಪಡೆದಿದ್ದೇನೆ. ನನ್ನ ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಆಶೀರ್ವಾದ ದಿಂದ ಪುನೀತನಾಗಿದ್ದೇನೆ ಎಂದು ಸಿಎಂ ಬಿಎಸ್​ವೈ ಅವರು ಟ್ವೀಟರ್​ ಮೂಲಕ ತಿಳಿಸಿದ್ದಾರೆ. ನಾಡಿನ ಸಮಸ್ತ ಜನತೆ, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಬಂಧುಗಳಲ್ಲಿ ವಿನಯಪೂರ್ವ ಮನವಿ ಎಂದು ತಿಳಿಸಿದ್ದಾರೆ. 
 
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್:
ಎಲ್ಲರ ಹಾರೈಕೆ, ಹರಕೆ ಹಾಗೂ ಆಶಿರ್ವಾದಗಳಿಂದಲೇ ನಿಮ್ಮಲ್ಲರ ಸೇವೆ ಮಾಡುವ ಸ್ಥಾನದ ಸೌಭಾಗ್ಯವನ್ನು ಪಡೆದಿದ್ದೇನೆ. ನನ್ನ ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಮಹಾಪೂರದಲ್ಲಿ ಮಿಂದು ಪುನೀತನಾಗಿದ್ದೇನೆ, ವಿನೀತನಾಗಿದ್ದೇನೆ. ಸರಳವಾಗಿ ಬರ್ತಡೇ ಆಚರಿಸೋಣ.  ಹಾಗಾಗಿ, ನಾಳಿನ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದೆಂದು ವಿನಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ.

మరింత సమాచారం తెలుసుకోండి: