ಇಡೀ ಪ್ರಪಂಚದಾದ್ಯಂತ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು ಈಗಾಗಲೇ ಪ್ರಪಂಚದಲ್ಲಿ 3ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಕೊರೋನಾ ವೈರಸ್ ಅನ್ನು ತಡೆಯಲು ಪ್ರಪಂಚದ ಪ್ರಪಂಚದ ಎಲ್ಲಾ ದೇಶಗಳು ಪ್ರಯತ್ನ ಪಡುತ್ತಿದ್ದರೂ ಕೂಡ ಸೋಂಕು ಮಾತ್ರ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಅನೇಕ ದೇಶಗಳಲ್ಲಿ ಕೊರೋನಾ ವೈರಸ್ ಇಂದಾಗಿ ಮಾಡಲಾಗಿದ್ದ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲಾಗಿರುವುದರಿಂದ ಕೊರೋನಾ ಸೋಂಕು ಪ್ರತಿನಿತ್ಯ ದ್ವಿಗುಣ ಗೊಳ್ಳುತ್ತಲೇ ಇದೆ. ಅಷ್ಟಕ್ಕೂ ಒಂದೇ ದಿನದಲ್ಲಿ ಕೊರೋನಾ ಸೋಂಕು ದಾಖಲಾದ ಸಂಖ್ಯೆ ಎಷ್ಟು ಗೊತ್ತಾ..?

 

 ಅಪಾಯಕಾರಿ ಕೊರೊನಾ ವೈರಾಣು ದಾಳಿ ವಿಶ್ವಾದ್ಯಂತ ಮತ್ತಷ್ಟು ತೀವ್ರಗೊಂಡಿದೆ. ಈ ಹೆಮ್ಮಾರಿಯ ಕಬಂಧ ಬಾಹುಗಳಲ್ಲಿ ಸುಮಾರು 250 ದೇಶಗಳು ನಲುಗುತ್ತಿವೆ,

ಈವರೆಗೆ 3.40 ಲಕ್ಷ ಜನರನ್ನು ಹೆಮ್ಮಾರಿ ಬಲಿ ಪಡೆದಿದೆ. ಅಲ್ಲದೇ ಸುಮಾರು 53 ಲಕ್ಷ ಮಂದಿ ಸೋಂಕು ರೋಗದಿಂದ ಬಳಲುತ್ತಿದ್ದಾರೆ. ಆತಂಕಕಾರಿ ಸಂಗತಿ ಎಂದರೆ ಕಳೆದ 24 ತಾಸುಗಳಲ್ಲಿ ವಿಶ್ವದಾದ್ಯಂತ 1 ಲಕ್ಷಕ್ಕೂ ಅಕ ಮಂದಿಗೆ  ಸೋಂಕು ತಗುಲಿದೆ.

 

ಕಳೆದ ನಾಲ್ಕು ದಿನಗಳಿಂದ ಜಗತ್ತಿನಾದ್ಯಂತ ಸರಾಸರಿ 1 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುತ್ತಿದೆ. ಜಗತ್ತಿನಾದ್ಯಂತ ಈವರೆಗೆ 3,40,040 ಮಂದಿ ಸಾವಿಗೀಡಾಗಿದ್ದು, 53,06,161 ಸೋಂಕು ಪ್ರಕರಣಗಳು ವರದಿಯಾಗಿವೆ. ಸಾಂಕ್ರಾಮಿಕ ರೋಗ ಪೀಡಿತರಲ್ಲಿ ಸುಮಾರು 44,583 ಮಂದಿ ಸ್ಥಿತಿ ಗಂಭೀರವಾಗಿದ್ದು, ಮರಣ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಇಂದು ರಾತ್ರಿ ವೇಳೆಗೆ ಮೃತರ ಸಂಖ್ಯೆ 3.55 ಲಕ್ಷ ಮತ್ತು ಸೋಂಕಿತರ ಸಂಖ್ಯೆ 54 ಲಕ್ಷ ಮೀರುವ ಆತಂಕವಿದೆ.

ಈ ಮಧ್ಯೆ, ರೋಗಿಗಳ ಚೇತರಿಕೆ ಪ್ರಮಾಣದಲ್ಲಿಯೂ ವೃದ್ದಿ ಕಂಡುಬಂದಿವೆ. 2,16,043 ಮಂದಿ ಸೋಂಕು ಪೀಡಿತರು ಚೇತರಿಸಿಕೊಂಡಿರುವುದು ಮತ್ತು ಗುಣಮುಖರಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

 

ಅಮೆರಿಕ, ಬ್ರೆಜಿಲ್, ರಷ್ಯಾ, ಸ್ಪೇನ್, ಮತ್ತು ಇಂಗ್ಲೆಂಡ್- ಅತಿ ಹೆಚ್ಚು ಸಾವು ಮತ್ತು ಸೋಂಕು ಸಂಭವಿಸಿದ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ ಭಾರೀ ಸಂಕಷ್ಟಕ್ಕೆ ಸಿಲುಕಿರುವ ದೇಶಗಳಲ್ಲಿ ಇಟಲಿ, ಫ್ರಾನ್ಸ್, ಜರ್ಮನಿ, ಟರ್ಕಿ ಮತ್ತು ಇರಾನ್ ದೇಶಗಳಿವೆ. ಅತಿ ಹೆಚ್ಚು ಸೋಂಕು ಮತ್ತು ಸಾವು ಪಟ್ಟಿಯಲ್ಲಿ ಭಾರತ 11ನೆ ಸ್ಥಾನದಲ್ಲಿದೆ.

ಏಷ್ಯಾ ಖಂಡದಲ್ಲಿ ಚೀನಾ, ದಕ್ಷಿಣ ಕೊರಿಯಾ, ಪಾಕಿಸ್ತಾನ ಸೇರಿದಂತೆ ಅನೇಕ ದೇಶಗಳಲ್ಲಿ ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೊರೊನಾ ವೈರಸ್ ಕೇಂದ್ರ ಬಿಂದು ಚೀನಾದ ವುಹಾನ್ ನಗರದಲ್ಲಿಯೂ ಹೊಸ ಪಾಸಿಟಿವ್ ಕೇಸ್‍ಗಳು ಕಂಡುಬರುತ್ತಿವೆ. ಜಗತ್ತಿನ 250ಕ್ಕೂ ಹೆಚ್ಚು ದೇಶಗಳು ಸತತ ಐದು ತಿಂಗಳುಗಳಿಂದ ಕೊರೊನಾ ನಿಗ್ರಹಕ್ಕಾಗಿ ನಿರಂತರ ಹೋರಾಟ ಮುಂದುವರಿಸಿದ್ದರೂ ಹೆಮ್ಮಾರಿ ನಿಯಂತ್ರಣ ಸಾಧ್ಯವಾಗದಿರುವುದು ಭಾರೀ ಕಳವಳಕಾರಿಯಾಗಿದೆ.

 

మరింత సమాచారం తెలుసుకోండి: