ಪ್ರಪಂಚದ ಸಂಕಷ್ಟಕ್ಕೆ ಕಾರಣವಾಗಿರುವ ಕೊರೋನಾ ವೈರಸ್ ಹುಟ್ಟಿಗೆ ಕಾರಣವಾದ ಚೀನಾದ ವಿರುದ್ಧ ಅಮೇರಿಕಾ ಕಿಡಿ ಕಾರುತ್ತಿರುವಂತಹ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿ ಮಾತನಾಡಲು ಆರಂಭಿಸಿತ್ತು ಇದರಿಂದಾಸಿಟ್ಟಾದ ಅಮೇರಿಕಾ ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಕೈಗೊಂಬೆ ಎಂದು ಆರೋಪವನ್ನು ಮಾಡುತ್ತಲೇ ಇತ್ತು. ಆದರೆ ಈಗ ಅಮೇರಿಕ ಒಂದು ಮಹತ್ವದ ನಿರ್ದಾರವನ್ನು ತೆಗದುಕೊಂಡಿದೆ. ಇದರಿಂದ ಇಡೀ ವಿಶ್ವವೇ ಆಶ್ಚರ್ಯಕ್ಕೀಡಾಗಿದೆ. ಅಷ್ಟಕ್ಕೂ ಆ ನಿರ್ಧಾರ ಯಾವುದು ಗೊತ್ತಾ..?

 

ಕೊರೊನಾವೈರಸ್ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ ಪಕ್ಷಪಾತ ಮಾಡುತ್ತಿದೆ ಎಂದು ನಿರಂತರವಾಗಿ ಆರೋಪ ಮಾಡುತ್ತಾ ಬಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಜೊತೆಗಿನ ಸಂಬಂಧವನ್ನು ಕಳೆದುಕೊಂಡಿದ್ದಾರೆ.

ಪ್ರತಿ ವರ್ಷ ವಿಶ್ವ ಆರೋಗ್ಯ ಸಂಸ್ಥೆಗೆ ಚೀನಾ 300 ಕೋಟಿ ರೂ. ನೀಡುತ್ತಿದೆ. ನಾವು 3 ಸಾವಿರ ಕೋಟಿ ರೂ. ನೀಡುತ್ತಿದ್ದೇವೆ. ಆದಾಗ್ಯೂ ವಿಶ್ವ ಆರೋಗ್ಯ ಸಂಸ್ಥೆ ಮೇಲೆ ಚೀನಾ ಸಂಪೂರ್ಣ ನಿಯಂತ್ರಣವನ್ನು ಹೊಂದಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

 

ಕೊರೊನಾವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದೆ ಎಂದು ಟೀಕಿಸುತ್ತಲೇ ಬಂದಿದ್ದ ಅಮೆರಿಕಾ ಇದೀಗ, ಅದರೊಂದಿಗಿನ ಸಂಬಂಧವನ್ನು ಕೊನೆಗೊಳಿಸಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

10 ದಿನಗಳ ಹಿಂದೆ ವಾಗ್ದಾಳಿ ನಡೆಸಿದ್ದ ಟ್ರಂಪ್ 'ಡಬ್ಲ್ಯೂಎಚ್‌ಒ ಚೀನಾದ ಕೈಗೊಂಬೆ' ಎಂದು ಆರೋಪಿಸಿದ್ದರು. ಅಲ್ಲದೆ ತನ್ನ ಎಲ್ಲಾ ಆರ್ಥಿಕ ನೆರವನ್ನು ನಿರ್ಬಂಧಿಸಿದ್ದರು. ಇದೀಗ ಶಾಶ್ವತ ಆರ್ಥಿಕ ನೆರವನ್ನು ಕಡಿತಗೊಳಿಸಲು ಅಮೆರಿಕಾ ನಿರ್ಧರಿಸಿದೆ.

 

'ಜಾಗತಿಕ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಸಂಸ್ಥೆ ಸರಿಯಾಗಿ ನಡೆದುಕೊಂಡಿಲ್ಲ. ವಿನಂತಿ ಮಾಡಲಾದ ಮತ್ತು ಅಗತ್ಯವಿರುವ ಸುಧಾರಣೆಗಳನ್ನು ಮಾಡಲು ವಿಶ್ವಸಂಸ್ಥೆ ವಿಫಲವಾಗಿದೆ. ಹೀಗಾಗಿ ನಾವು ಅದರೊಂದಿಗಿನ ನಮ್ಮ ಸಂಬಂಧವನ್ನು ಕೊನೆಗೊಳಿಸುತ್ತಿದ್ದೇವೆ' ಎಂದು ಟ್ರಂಪ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

 

ಚೀನಾ ದೇಶವು ಡಬ್ಲ್ಯೂಎಚ್‌ಒಗೆ 45 ಮಿಲಿಯನ್ ಡಾಲರ್ ನೀಡಿದರೆ, ಅಮೆರಿಕಾ ಅಂದಾಜು 450 ಮಿಲಿಯನ್ ಡಾಲರ್ ನೆರವು ನೀಡುತ್ತಿದೆ. ಆದರೂ ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಹಿಡಿತದಲ್ಲಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ. ಜೊತೆಗೆ ಡಬ್ಲ್ಯೂಹೆಚ್‌ಒಗೆ ನೀಡುವ ಹಣವನ್ನು ಜಾಗತಿಕ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಇತರೆ ಸಂಸ್ಥೆಗಳಿಗೆ ನೀಡಲಾಗುತ್ತದೆ ಎಂದು ಇದೇ ವೇಳೆ ಟ್ರಂಪ್ ಅವರು ತಿಳಿಸಿದ್ದಾರೆ.

 

ಬಳಿಕ ಚೀನಾ ವಿರುದ್ಧವೂ ತೀವ್ರವಾಗಿ ಕಿಡಿಕಾರಿರುವ ಅವರು, ಹಾಂಕಾಂಗ್'ಗೆ ಅಮೆರಿಕಾ ಈವರೆಗೆ ನೀಡಿಕೊಂಡು ಬಂದಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಿದೆ. ಚೀನಾ ರೀತಿಯೇ ಅದನ್ನೂ ಕಾಣಲಿದೆ. ಅಮೆರಿಕಾ ವಿವಿ ಹಾಗೂ ಕಾಲೇಜುಗಳಲ್ಲಿ ಕೆಲ ಚೀನಾ ವಿದ್ಯಾರ್ಥಿಗಳ ಪ್ರವೇಶಕ್ಕೆ ತಡೆಯೊಡ್ಡಲಾಗುತ್ತದೆ ಎಂದಿದ್ದಾರೆ.

 

 

 

 

 

 

మరింత సమాచారం తెలుసుకోండి: