ಕೊರೋನಾ ವೈರಸ್ ಇಂದಾಗಿ  ದೇಶವನ್ನೇ ಲಾಕ್ ಡೌನ್ ಮಾಡಲಾದ ಸಂದರ್ಭದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಯನ್ನು ಮುಂದೂಡಲಾಗಿತ್ತು ಆದರೆ ಈಗ ಲಾಕ್ ಡೌನ್ ಸಡಿಲಿಕೆಯಾಗಿರುವುದರಿಂದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಪರೀಕ್ಷೆಯನ್ನು ಮಾಡಲು ತೀರ್ಮಾನಿಸಲಾಗಿರುವುದರಿಂದ, ಪರೀಕ್ಷೆಯನ್ನು ಬರೆಯಲಯು ಬರುವಂತಹ ಮಕ್ಕಳಿಗೆ ಯಾವುದೇ ತೊಂದರೆಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

 

 ಹೌದು ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಇಡೀ ಸಮಾಜ ಎದುರು ನೋಡುತ್ತಿದ್ದು, ಯಾವುದೇ ಅವಘಡಗಳಿಗೆ ಅವಕಾಶ ನೀಡದೇ ಪರೀಕ್ಷೆ ಯನ್ನು ಯಶಸ್ವಿಯಾಗಿ ನಿರ್ವಹಿಸಬೇಕೆಂದು ಸಚಿವ ಸುರೇಶ್‍ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತೆಯ ಕುರಿತಂತೆ ರಾಜ್ಯಾದ್ಯಂತ 31 ಜಿಲ್ಲಾ ಕೇಂದ್ರಗಳಿಗೆ ಕಳೆದ ಹದಿನೈದು ದಿನಗಳಲ್ಲಿ ಸುಮಾರು ಐದು ಸಾವಿರ ಕಿಲೋಮೀಟರ್‍ಗಳಷ್ಟು ಸಂಚಾರ ಕೈಗೊಂಡು, ಸಭೆ ನಡೆಸಿ ನಿರ್ದೇಶನ ನೀಡಿರುವ ಅವರು, ಇಂದು ತಮ್ಮ ಅಭಿಯಾನದ ಕಡೆಯ ಭಾಗವಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿದರು. 

 

ಉಚ್ಛನ್ಯಾಯಾಲಯದ ನಿರ್ದೇಶನದ ಅನುಸಾರ ನಡೆಯುತ್ತಿರುವ ಪರೀಕ್ಷೆಗಳು ಸಮಾಜಕ್ಕೆ ಭರವಸೆಯನ್ನು ಮೂಡಿಸುವ ರೀತಿಯಲ್ಲಿ ಅಚ್ಚುಕಟ್ಟಾಗಿ ನಿರ್ವಹಣೆಯಾಗಬೇಕು. ಇದೊಂದು ವಿಶಿಷ್ಟ ಸಾಮಾಜಿಕ ಸಂದರ್ಭವನ್ನು ಪ್ರತಿಷ್ಠೆಯಾಗಿ ಪರಿಗಣಿಸದೇ ನಮ್ಮ ಸಾಮಾಜಿಕ ಬದ್ಧತೆಗೆ ಸವಾಲಾಗಿ ಪರಿಗಣಿಸಿ ಎಲ್ಲ ಅಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಕೆಂದು ಸೂಚಿಸಿದರು.

ವಿದ್ಯಾರ್ಥಿ, ಪೋಷಕರ ನಿರೀಕ್ಷೆಗೆ ಅನುಗುಣವಾಗಿ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆಯಕು. ಪರೀಕ್ಷೆಗೆ ಮುಂಚೆಯೇ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಸಹಕಾರದಿಂದ ಸ್ಯಾನಿಟೈಜ್ ಮಾಡಬೇಕಲ್ಲದೇ, ಪ್ರತಿ ದಿನದ ಪರೀಕ್ಷೆಯ ಬಳಿಕವೂ ಸ್ಯಾನಿಟೈಜ್ ಕ್ರಮಗಳನ್ನು ಅನುಸರಿಸಬೇಕೆಂದು ಅವರು ಸೂಚಿಸಿದರು.

 

ಚಂದನದಲ್ಲಿ ವಿಶೇಷ ಪುನರ್ಮನನಪ್ರಶ್ನೆ ಪತ್ರಿಕೆಯಾಧಾರಿತವಾದ ವಿಶೇಷ ಪುನರ್ಮನನ ತರಗತಿಗಳನ್ನು ಇದೇ ತಿಂಗಳ 12ರಿಂದ 17 ರವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಎಲ್ಲ ವಿದ್ಯಾರ್ಥಿಗಳು ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕೆಂದು ಹೇಳಿದರು.

 

ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ಇಂತಹ ಸಂದರ್ಭದಲ್ಲಿ ಶಿಕ್ಷಣ ಇಲಾಖೆಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದ್ದು, ಮಕ್ಕಳು ಹಾಗೂ ಪೋಷಕರಲ್ಲಿ ಭರವಸೆಯನ್ನು ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ನಿಟ್ಟಿನಲ್ಲಿ ಮಾಹಿತಿ ಕರಪತ್ರಗಳು, ವಿಡಿಯೋ ಸಂದೇಶಗಳನ್ನು ರಾಜ್ಯಾದ್ಯಂತ ಪ್ರತಿ ಪೋಷಕ, ವಿದ್ಯಾರ್ಥಿಗೆ ತಲುಪಿಸುವ ಕ್ರಮಕ್ಕೆ ಮುಂದಾಗಬೇಕಿದೆ.

 

ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಈ ಸದಾಶಯವನ್ನು ವಿದ್ಯಾರ್ಥಿ-ಪೋಷಕರಿಗೆ ತಲುಪಿಸುವ ವಾಹಕರಾಗಿ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.

 

మరింత సమాచారం తెలుసుకోండి: