ಕೊರೋನಾ ವೈರಸ್ ನಿಂದಾಗಿ ಎಸ್ಎಸ್ ಎಲ್ ಸಿ ಪರೀಕ್ಷೆಯನ್ನು ಮುದೂಡಲಾಗುತ್ತಿತ್ತು ಆದರೆ ಈ ಪರೀಕ್ಷೆ ದಿನಾಂಕವನ್ನು ಸರ್ಕಾರ ಅಳೆದು ತೂಗಿ ದಿನಾಂಕವನ್ನು ನಿಗದಿ ಮಾಡಲಾಗಿದೆ. ಆದರೆ ಇನ್ನೊಂದು ಕಡೆ ಪರೀಕ್ಷೆ ಅತ್ತಿರ ಬರುತ್ತಿದ್ದರೆ ಪೋಷಕರು ಆತಂಕಗೊಂಡಿದ್ದಾರೆ. ಆದರೆ ಇವರ ಆತಂಕವನ್ನು ಕಡಿಮೆ ಮಾಡುವಂತಹ ಕ್ರಮಗಳನ್ನು ಮಾಡಲಾಗಿದೆ. ಇದಕ್ಕೆ ತಕ್ಕಂತಹ ಎಲ್ಲಾ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಲಾಗಿದೆ.

 

ಹೌದು ನಾಳೆಯಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗಳ ಕೇಂದ್ರಗಳು ಕೇವಲ ಪರೀಕ್ಷಾ ಕೇಂದ್ರಗಳಲ್ಲ, ಅವು ಸಂಪೂರ್ಣ ಸುರಕ್ಷಿತಾ ಕೇಂದ್ರಗಳಾಗಿದ್ದು ಯಾವುದೇ ಪೋಷಕರು ಆತಂಕಕ್ಕೊಳಗಾಗದೇ ತಮ್ಮ ಮಕ್ಕಳನ್ನು ಧೈರ್ಯವಾಗಿ ಪರೀಕ್ಷೆಗೆ ಕಳುಹಿಸಿಕೊಡಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

 

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್‌ ಕುಮಾರ್‌ ರಾಜ್ಯಾದ್ಯಂತ ಇರುವ 2879 ಪರೀಕ್ಷಾ ಕೇಂದ್ರಗಳಲ್ಲಿ 8,48,203 ವಿದ್ಯಾರ್ಥಿಗಳು ನಾಳೆಯಿಂದ ಪರೀಕ್ಷೆಗಳನ್ನು ಬರೆಯಲಿದ್ದು, ಸರ್ಕಾರವು ಸುಗಮ ಪರೀಕ್ಷಾ ನಿರ್ವಹಣೆಗೆ ಎಲ್ಲ ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದೆ ಎಂದರು.



ಪ್ರತಿ ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿ ಆರೋಗ್ಯ ತಪಾಸಣಾ ಕೌಂಟರ್‌ಗಳು ಸ್ಥಾಪನೆ ಮಾಡಲಾಗಿದ್ದು, ರಾಜ್ಯಾದ್ಯಾಂತ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ 5755 ಆರೋಗ್ಯ ತಪಾಸಣಾ ಕೌಂಟರ್‌ಗಳು ಕಾರ್ಯ ನಿರ್ವಹಿಸಲಿವೆ ಎಂದ ಸಚಿವರು ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಇಬ್ಬರಂತೆ ಕಿರಿಯ ಆರೋಗ್ಯ ಸಹಾಯಕರು ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಪರೀಕ್ಷಾ ಕೇಂದ್ರ ಪ್ರವೇಶಿಸುವ ಪ್ರತಿಯೊಬ್ಬ ವಿದ್ಯಾರ್ಥಿ/ಸಿಬ್ಬಂದಿ ಮಾಸ್ಕ ಧರಿಸಿರುವುದನ್ನು ಖಚಿತ ಪಡಿಸಿಕೊಂಡು ಸ್ಯಾನಿಟೈಸರ್‌ಗಳಿಂದ ಕೈಗಳನ್ನು ಸ್ವಚ್ಛಗೊಳಿಸಿ ದೇಹದ ಉಷ್ಣತೆಯನ್ನು ಪರಿಶೀಲಿಸಿ ಪರೀಕ್ಷಾ ಕೇಂದ್ರದೊಳಕ್ಕೆ ಬರಲು ಅವಕಾಶ ಕಲ್ಪಿಸಲಾಗುವುದು ಎಂದು ವಿವರಿಸಿದರು.

 

ಪರೀಕ್ಷಾ ಕೇಂದ್ರ ಸ್ಥಳಾಂತರ: ಕಂಟೈನ್‌ಮೆಂಟ್‌ ಜೋ಼ನ್‌ ಎಂದು ಪರಿಗಣಿಸಲಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಾಂತ 11 ಜಿಲ್ಲೆಗಳ 27 ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಲಾಗಿದ್ದು, ಈ ಕೇಂದ್ರಗಳಲ್ಲಿನ 7490 ವಿದ್ಯಾರ್ಥಿಗಳು ಸ್ಥಳಾಂತರಿಸಿದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲ್ಲಿದ್ದಾರೆ ಎಂಬ ಮಾಹಿತಿಯನ್ನು ಸಚಿವ ಸುರೇಶ್‌ ಕುಮಾರ್‌ ನೀಡಿದರು. ರಾಜ್ಯಾದ್ಯಾಂತ 10 ವಿದ್ಯಾರ್ಥಿಗಳು ಈ ದಿನದ ಅಂತ್ಯಕ್ಕೆ ಕೋವಿಡ್-19 ಸೊಂಕಿತರೆಂದು ಆರೋಗ್ಯ ಇಲಾಖೆಯು ಮಾಹಿತಿಯನ್ನು ನೀಡಿದ್ದು, ಗೃಹ ಕ್ವಾರೆಂಟೈನ್‌ ನಲ್ಲಿರುವ 09 ವಿದ್ಯಾರ್ಥಿಗಳು ಸೇರಿದಂತೆ 19 ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಲ್ಲಿ ಅವಕಾಶವನ್ನು ಕಲ್ಪಿಸಲಾಗುವುದುದೆಂದು ಸಚಿವ ಸುರೇಶ್‌ ಕುಮಾರ್‌ ಹೇಳಿದರು.

 

ಪರೀಕ್ಷೆ ನಡೆಸುವುದು ಸರ್ಕಾರದ ಕರ್ತವ್ಯ: ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ನಡೆಸುವುದು ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿಲ್ಲ. ಶಿಕ್ಷಣ ಕ್ಷೇತ್ರದ ಪ್ರಮುಖರು ಸೇರಿ ಹಲವಾರು ಜನರ ಜೊತೆ ಸಂವಾದ ಚರ್ಚೆ ನಡೆಸಿದ ಬಳಿಕ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಪರೀಕ್ಷೆ ನಡೆಸದಂತೆ ಕೆಲವರು ಉಚ್ಛ ನ್ಯಾಯಾಲಯ, ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ನ್ಯಾಯಾಲಯಗಳು ಸರ್ಕಾರದ ತೀರ್ಮಾನವನ್ನು ಒಪ್ಪಿ ಪರೀಕ್ಷೆಗೆ ಅನುಮತಿ ನೀಡಿವೆ. ಹಾಗಾಗಿ ಸರ್ಕಾರಕ್ಕೆ ಪರೀಕ್ಷೆ ನಡೆಸುವುದು ಆದ್ಯ ಕರ್ತವ್ಯವಾಗಿದ್ದು, ವಿದ್ಯಾರ್ಥಿಗಳ ಸಂಪೂರ್ಣ ಹಿತವನ್ನು ಕಪಾಡಲು ನಾವು ಬದ್ಧರಾಗಿದ್ದೇವೆ. ಯಾವುದೇ ಆತಂಕವಿಲ್ಲದೆ, ಪರೀಕ್ಷೆ ಎದುರಿಸುವಂತೆ ವಿದ್ಯಾರ್ಥಿಗಳಲ್ಲಿ ಸುರೇಶ್‌ ಕುಮಾರ್‌ ಮನವಿ ಮಾಡಿದರು.

 

మరింత సమాచారం తెలుసుకోండి: