ಕೊರೋನಾ ವೈರಸ್  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಪ್ರತಿನಿತ್ಯವೂ ಕೂಡ ಸಾವಿನ ಪ್ರಮಾಣವೂ ಕೂಡ ಹೆಚ್ಚಾಗುತ್ತಿದೆ, ಇದರ ಜೊತೆಗೆ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬೆಡ್ ಗಳ ಕೊರತೆಗಳು ಸಹ ಉಂಟಾಗುತ್ತಿದ್ದೆ.  ಇದರಿಂದಾಗಿ  ಕೊವಿಡ್ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳನ್ನೂ ಕೂಡ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಆದರೂ ಕೂಡ ಕೊರೋನಾ ವೈರಸ್ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ ಈ ಕುರಿತು ಮುಖ್ಯ ಮಂತ್ರಿ ನೀಡಿದ ಹೇಳಿಕೆಯೊಂದರಿಂದ ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಾಗುವಂತೆ ಮಾಡಿದೆ.

 

ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿಹೋಗಿರುವ ಆಘಾತಕಾರಿ ವಿಷಯವನ್ನು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರೇ ಬಹಿರಂಗಪಡಿಸಿದ್ದಾರೆ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಮ್ಮ ಕೈ ಮೀರುವ ಹಂತಕ್ಕೆ ಬಂದಿದೆ. ಆದರೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಎಲ್ಲರೂ ಇದನ್ನು ತಡೆಯಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

 

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹಾಗೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಈ ಹೇಳಿಕೆ ಜನತೆಯಲ್ಲಿ ಇನ್ನಷ್ಟು ಆತಂಕ ಉಂಟು ಮಾಡಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಿರೀಕ್ಷೆಯನ್ನು ಮೀರಿ ಕೆಲ ಜಿಲ್ಲೆಗಳಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ. ಆದರೂ ಜನರನ್ನು ರಕ್ಷಣೆ ಮಾಡಲು ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

 

ರಾಜ್ಯದ ಜನತೆ ಒಳಗಾಗುವುದು ಬೇಡ, ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹಬ್ಬದಂತೆ ನಮ್ಮ ಸರ್ಕಾರ ಬದ್ಧವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ, ಪೆÇಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದಾರೆ ಎಂದರು. ಕೊರೊನಾ ಸೋಂಕು ಪೀಡಿತರಿಗೆ ತೊಂದರೆಯಾಗದಂತೆ ರಕ್ಷಣೆ ಮಾಡಲು ತಕ್ಷಣವೇ 200 ಆಯಂಬುಲೆನ್ಸ್‍ಗಳನ್ನು ಖರೀದಿ ಮಾಡಲು ಸೂಚನೆ ಕೊಡಲಾಗಿದೆ.

ನಿನ್ನೆಯಷ್ಟೇ 400 ಆಯಂಬುಲೆನ್ಸ್ ಖರೀದಿಗೆ ಸೂಚನೆ ಕೊಡಲಾಗಿತ್ತು. ಕೊರೊನಾ ಪಾಸಿಟಿವ್ ಖಚಿತವಾದ ತಕ್ಷಣ ತಡಮಾಡದೆ ರೋಗಿಗಳನ್ನು ಆಸ್ಪತ್ರೆಗೆ ಕರೆತರಲು ಇವುಗಳನ್ನು ಮೀಸಲಿಡುವುದಾಗಿ ಹೇಳಿದರು.

 

 ಕೇಂದ್ರ ಸರ್ಕಾರ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದೆ. ಇನ್ನು ಕೆಲವು ಕಠಿಣ ಕ್ರಮಗಳನ್ನು ಜಾರಿ ಮಾಡುವಂತೆ ಸಲಹೆ ಮಾಡಿದ್ದಾರೆ. ಅದನ್ನು ಸಹ ನಾವು ಅನುಷ್ಠಾನ ಮಾಡುತ್ತೇವೆ. ನಾಳೆ ಪತ್ರಿಕಾಗೋಷ್ಠಿ ಕರೆದಿದ್ದು ಎಲ್ಲ ವಿವರಗಳನ್ನು ಮಾಧ್ಯಮಗಳಿಗೆ ತಿಳಿಸುವುದಾಗಿ ಯಡಿಯೂರಪ್ಪ ಹೇಳಿದರು.

 

ಮೂಲಗಳ ಪ್ರಕಾರ ಬೆಂಗಳೂರು ನಗರ, ಶಿವಮೊಗ್ಗ, ಯಾದಗಿರಿ, ಕಲಬುರಗಿ, ಉಡುಪಿ, ಚಿಕ್ಕಬಳ್ಳಾಪುರ, ರಾಯಚೂರು, ಬೀದರ್ ಸೇರಿದಂತೆ 8ರಿಂದ 10 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಒಂದೇ ಸಮನೆ ಏರಿಕೆಯಾಗುತ್ತಿರುವ ಬಗ್ಗೆ ಯಡಿಯೂರಪ್ಪನವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಮತ್ತೆ ಲಾಕ್‍ಡೌನ್ ಜಾರಿಗೊಳಿಸಿ ಬಿಗಿ ಕ್ರಮ ಕೈಗೊಳ್ಳಬೇಕೆಂಬ ಚಿಂತನೆಯಲ್ಲಿದ್ದಾರೆಂದು ತಿಳಿದುಬಂದಿದೆ.

 

మరింత సమాచారం తెలుసుకోండి: