ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದರಲ್ಲೂ ಕೂಡ  ರಾಜ್ಯದ ರಾಜಧಾನಿಯಲ್ಲಿ ಪ್ರತಿನಿತ್ಯ ಕೊರೋನಾ ಸೋಂಕು ಸಾವಿರದ ಗಡಿಯನ್ನು ತಲುಪುತ್ತಿದೆ. ಹಾಗಾಗಿ ಬೆಂಗಳೂರಿನ ಜನ ಕೊರೋನಾ ಸೋಂಕಿಗೆ ಹೆದರಿ ಬೆಂಗಳೂರನ್ನು ತೊರೆದು ತಮ್ಮ ತಮ್ಮ ಮೂರುಗಳತ್ತ ಮುಖಮಾಡುತ್ತಿದ್ದಾರೆ. ಇದರಿಂದ ಗ್ರಾಮಾಂತರ ಪ್ರದೇಶಗಳಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಾಗಿರುವುದರಿಂಧ ಸರ್ಕಾರ ಮತ್ತಷ್ಟು ಆತಂಕದಲ್ಲಿ ಸಿಲುಕಿದೆ. ಇದನ್ನು ತಪ್ಪಿಸುವ ಸಲುವಾಗಿ ಸರ್ಕಾರ  ಒಂದು ಹೊಸ ನಿಯಮವನ್ನು ರೂಪಿಸಿದೆ. ಇದರಿಂದ ಸರ್ಕಾರ ಬೆಂಗಳೂರನ್ನು ಬಿಡುವವರಿಗೆ ತೊಂದರೆಯಾಗಬಹುದು. 

 

 ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು, 2062 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,887ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ, ಸಿಲಿಕಾನ್ ಸಿಟಿಯಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಬೆಂಗಳೂರು ತೊರೆಯುವವರ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ. ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

 

ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಒಂದೇ ದಿನ 1148 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸಾವಿರ ಗಡಿದಾಟುತ್ತಿದೆ. ಹೀಗಾಗಿ ವಿವಿಧೆಡೆಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರು ಮಾರಣಾಂತಿಕ ಕೊರೊನಾ ಸೋಂಕು ಭೀತಿಯಿಂದ ಬೆಂಗಳೂರು ತೊರೆದು ತಮ್ಮ ಊರುಗಳಿಗೆ ಧಾವಿಸುತ್ತಿದ್ದಾರೆ. ಹೀಗಾಗಿ ಗ್ರಾಮೀಣ ಭಾಗಗಳಿಗೂ ಕೊರೊನಾ ಸೋಂಕು ಭೀತಿ ಎದುರಾಗಿದೆ. ಮತ್ತೆ ಒಂದು ಅಂದಾಜಿನ ಪ್ರಕಾರ ಅಂತರ ಜಿಲ್ಲಾ ಸಂಚಾರ ಹಾಗೂ ವಲಸಿರಿಂದ ಸೋಂಕು ಹೆಚ್ಚಳವಾಗುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿ, ಅಂತರ್ ಜಿಲ್ಲಾ ಸಂಚಾರಕ್ಕೆ ನಿರ್ಬಂಧ ವಿಧಿಸಲು ಚಿಂತನೆ ನಡೆಸಿದೆ.

 

ಮಾರಕ ಕೊರೊನಾ ಸೋಂಕಿಗೆ ಹೆದರಿ ರಾಜಧಾನಿ ಬೆಂಗಳೂರು ತೊರೆಯುತ್ತಿರುವವರಿಗೆ ಬೆಂಗಳೂರು ಬಿಟ್ಟು ಹೋಗದಂತೆ ಸಿಎಂ ಯಡಿಯೂರಪ್ಪ, ಸಚಿವರು ಪದೇ ಪದೇ ಮನವಿ ಮಾಡುತ್ತಿದ್ದಾರೆ. ಆದರೂ ದಿನೇ ದಿನೇ ವಲಸಿಗರು ತಮ್ಮ ಸರಕುಗಳೊಂದಿಗೆ ಬೆಂಗಳೂರು ತೊರೆಯುತ್ತಿದ್ದಾರೆ. ಹೀಗಾಗಿ ದಿನೇ ದಿನೇ ಮಿತಿ ಮೀರಿ ವ್ಯಾಪಿಸುತ್ತಿರುವ ಕೊರೊನಾಗ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹಾಗೂ ಆಯಾ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ನಿರ್ಧರಿಸಿವೆ. ಜನತೆಗೆ ಮೂಲಭೂತ ಅವಶ್ಯಕತೆ ಒದಗಿಸಲು ವಿಶೇಷ ತಂಡ ರಚನೆ ಮಾಡಲಾಗುತ್ತಿದೆ. ಇದರೊಂದಿಗೆ ಅನಾವಶ್ಯಕವಾಗಿ ಓಡಾಟ ನಡೆಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಸುಖಾಸುಮ್ಮನೇ ಓಡಾಡಿದರೆ ಕೇಸ್ ದಾಖಲಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಇದರೊಂದಿಗೆ ಸೋಂಕು ಹರಡದಂತೆ ತಡೆಯಲು ಸಹ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಮನೆಯಿಂದ ಹೊರಬಂದರೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಲೇಬೇಕೆಂದು ಸೂಚನೆ ನೀಡಲಾಗಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಈಗಾಗಲೇ ದಂಡ ವಿಧಿಸಲಾಗುತ್ತಿದೆ.

 

ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿನೇ ದಿನೇ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಪರಿಸ್ಥಿತಿ ಕೈಮೀರುತ್ತಿದೆ. ಬೆಂಗಳೂರು ಮಾತ್ರವಲ್ಲದೇ, ಶಿವಮೊಗ್ಗ, ರಾಯಚೂರು, ದಕ್ಷಿಣ ಕನ್ನಡ, ಮೈಸೂರು, ಸೇರಿದಂತೆ ಇತರೇ ಜಿಲ್ಲೆಗಳಲ್ಲೂ ದಿನೇ ದಿನೇ ಸೋಂಕು ಏರಿಕೆಯಾಗುತ್ತಲೇ ಇದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸುವುದು ಅನಿವಾರ್ಯವಾಗಿದೆ....

మరింత సమాచారం తెలుసుకోండి: