ಕೊರೋನಾ ಸೋಂಕಿನಿಂದ ದಾಖಲಾದ ಪ್ರಮಾಣದಲ್ಲಿ ಚೇತರಿಸಿಕೊಂಡವರ ಪ್ರಮಾಣಗಳೂ ಕೂಡ ಹೆಚ್ಚಾಗುತ್ತಿದೆ, ಹಾಗಾಗಿ ಇಂತ ಕೊರೋನಾ ಸೋಂಕಿನಿಂದದ ಗುಣಮುಖರಾದವರಿಗೆ ಸರ್ಕಾರದಿಂದ ಐದು ಸಾವಿರವನ್ನು ನೀಡಲಾಗುವುದು ಎಂದು ಘೋಷಣೆಯನ್ನು ಮಾಡಿದೆ. ಆದರೆ ಒಂದು ಷರತ್ತು ಇದೆ. ಈ ಶರತ್ತಿಗೆ ಇವರು ಒಪ್ಪಿದ್ದೇ ಆದಲ್ಲಿ 5 ಸಾವಿರವನ್ನು ಪಡೆಯಬಹುದಾಗಿದೆ. ಅಷ್ಟಕ್ಕೂ ಸರ್ಕಾರ ವಿಧಿಸಿರುವ ಶರತ್ತು ಏನು ಗೊತ್ತಾ..?

 

ಕೊವಿಡ್ ಸೋಂಕಿನಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಿದರೆ ಪ್ರತಿಯೊಬ್ಬರಿಗೂ 5 ಸಾವಿರ ರೂ, ನೀಡುವುದಾಗಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ. ಪ್ಲಾಸ್ಮಾ ದಾನ ಮಾಡಿದರೆ ಸರ್ಕಾರವು‌ 5,000 ರೂಪಾಯಿ‌ ಆರೈಕೆ ‌ಭತ್ಯೆ ನೀಡಬೇಕೆಂದು ಕೊವಿಡ್ ಮಾನವ ಶಕ್ತಿ ಮತ್ತು ತರಬೇತಿ ಟಾಸ್ಕ್ ಫೋರ್ಸ್ ಈ ಹಿಂದೆ ಶಿಫಾರಸು ಮಾಡಿತ್ತು. ಇದೀಗ, ಈ ಶಿಫಾರಸ್ಸಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

 

ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳಲು ಪ್ಲಾಸ್ಮಾ ಥೆರಪಿ ಮಾಡಲಾಗುತ್ತಿದ್ದು, ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾಕ್ಕೆ ಹೆಚ್ಚಿನ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಸೋಂಕು ಮುಕ್ತರಾದವರು 14 ದಿನಗಳ ಬಳಿಕ ತಮ್ಮ ರಕ್ತದಲ್ಲಿನ ಪ್ಲಾಸ್ಮಾ ಕಣಗಳನ್ನು ನೀಡಬಹುದು. ಪ್ಲಾಸ್ಮಾ ತೆಗೆದುಕೊಳ್ಳುವವರ ರಕ್ತದ ಗುಂಪು ಒಂದೇ ಆಗಿರಬೇಕು ಎಂದು ಸ್ಪಷ್ಟಪಡಿಸಿದರು.

 

ಸಕ್ರೀಯ ರೋಗಿಗಳ‌ ಚಿಕಿತ್ಸೆಗೆ ಈಗಾಗಲೇ ಸೋಂಕಿನಿಂದ ಗುಣಮುಖರಾದವರ ಪ್ಲಾಸ್ಮಾ ಸಹಕಾರಿಯಾಗಲಿದೆ. ಹೀಗಾಗಿ, ಸೋಂಕಿನಿಂದ ಗುಣಮುಖರಾದವರು ಡಿಸ್ಚಾರ್ಜ್​ ಆದ‌ 14 ರಿಂದ 28 ದಿನಗಳ ಒಳಗಾಗಿ ಪ್ಲಾಸ್ಮಾ ದಾನ ಮಾಡಬಹುದು.ಪ್ಲಾಸ್ಮಾ ದಾನ ಮಾಡಿದವರಿಗೆ ಈ ಆರೈಕೆ ‌ಭತ್ಯೆಯ ಮೂಲಕ ಉತ್ತಮ ಗುಣಮಟ್ಟದ ಆಹಾರ ಖರೀದಿಸಲು ನೆರವಾಗಲಿದೆ ಎಂದು ಹೇಳಿದರು.

 

ಐಸಿಯು ನಲ್ಲಿ 597 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹವರ ಚಿಕಿತ್ಸೆಗೆ ಗುಣಮುಖರಾದವರ ಪ್ಲಾಸ್ಮಾ ಅತ್ಯಂತ ಪರಿಣಾಮಕಾರಿಯಾಗಿದ್ದು, ಪ್ಲಾಸ್ಮಾ ದಾನ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ದಾವಣಗೆರೆಯ ಜೆಜೆ‌ಎಂ‌ಎಂಸಿ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿಗಳ ಶಿಷ್ಯವೇತನ 3-4 ದಿನಗಳಲ್ಲಿ ಬಿಡುಗಡೆ. ಸರ್ಕಾರ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ಅರಿಯರ್ಸ್ ಸಮೇತ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಮಹತ್ವದ ಘೋಷಣೆ ಮಾಡಿದರು.

 

ಬೆಂಗಳೂರಿನ ಎಲ್ಲಾ ವಲಯಗಳ ಬೂತ್ ಕಾರ್ಯಪಡೆಯ ನೋಡಲ್ ಅಧಿಕಾರಿಗಳೊಂದಿಗೆ ಸಚಿವ ಸುಧಾಕರ್ ಸಮಾಲೋಚನೆ ನಡೆಸಿ 2 ದಿನಗಳಲ್ಲಿ ಕಾರ್ಯಪಡೆ ರಚಿಸಲು ನಿರ್ದೇಶನ. ಸದಸ್ಯರ ಕರ್ತವ್ಯ ಮತ್ತು ನಿರ್ವಹಿಸಬೇಕಾದ ಕೆಲಸಗಳ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.

 

ಲಾಕ್ ಡೌನ್ ಅವಧಿಯಲ್ಲಿ ಮನೆಮನೆ ಸಮೀಕ್ಷೆ ನಡೆಸಿ 60 ವರ್ಷ ಮೇಲ್ಪಟ್ಟವರಿಗೆ ರಿವರ್ಸ್ ಐಸೋಲೇಶನ್ ಮಾಡಲು ಸೂಚನೆ ನೀಡಿದ ಅವರು,ಹಾಸಿಗೆ ವ್ಯವಸ್ಥೆ, ಆಂಬುಲೆನ್ಸ್ ಒದಗಿಸುವುದು ಮುಂತಾದ ನಿರ್ಧಾರಗಳನ್ನು ಕಾರ್ಯಪಡೆ ತೆಗೆದುಕೊಳ್ಳಲಿದೆ ಎಂದರು.

 

ಕೊವಿಡ್ ನಿರ್ವಹಣೆ ಮತ್ತು ನಿಗ್ರಹಕ್ಕೆ ಸರ್ಕಾರದ ಜೊತೆ ಕೈಜೋಡಿಸುವಂತೆ ನಾಗರಿಕರಲ್ಲಿ ಸಚಿವರ ಮನವಿ. ಸಹಕಾರ ನೀಡುತ್ತಿರುವ ಸಂಘ ಸಂಸ್ಥೆಗಳಿಗೆ ಸಚಿವರು ಕೃತಜ್ಞತೆ ಸಲ್ಲಿಸಿದರು.

 

మరింత సమాచారం తెలుసుకోండి: