ವಾಲ್ಮೀಕಿ ಮೀಸಲಾತಿ ಸಮುದಾಯದ ಮೀಸಲಾತಿಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಯುತ್ತಿದೆ. ಈ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಕೈ ಜೋಡಿಸಿದ್ದಾರೆ. ಹೀಗಾಗಿ ಹೋರಾಟಕ್ಕೆ ಮತ್ತಷ್ಟು ಕಾವು ಹೆಚ್ಚಾಗಿದೆ. ಅಷ್ಟಕ್ಕೂ ಸುದೀಪ್ ಈ ಹೋರಾಟಕ್ಕೆ ಕೈ ಜೋಡಿಸಿದ್ದು ಯಾಕೆ ಅನ್ನೋದೇ ಸದ್ಯದ ಪ್ರಶ್ನೆ.


ಹೌದು, ಕಿಚ್ಚ ಸುದೀಪ್ ಟ್ವೀಟರ್ ನಲ್ಲಿ ತಮ್ಮ ವಿಡಿಯೋ ಅಪ್ ಲೋಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ, ಶ್ರೀ ಪ್ರಸನ್ನಾನಂ ಸ್ವಾಮೀಜಿಗಳು 16 ದಿನಗಳಿಂದ ಪಾದಯಾತ್ರೆ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಜಯವಾಗಲಿ ಎಂದಿದ್ದಾರೆ.


ಇಷ್ಟೇ ಅಲ್ಲದೇ, ಒಂದು ಒಳ್ಳೆಯ ಉದ್ದೇಶಕ್ಕಾಗಿ ಈ ಹೋರಾಟ ನಡೆಯುತ್ತಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಈ ಹೋರಾಟ ನಡೆಯುತ್ತಿದೆ. ಅದಕ್ಕಾಗಿ ಸಾವಿರಾರು ಜನರು ಹೆಜ್ಜೆ ಹಾಕಿ ಬಲ ನೀಡಿದ್ದೀರಿ. ಇದಕ್ಕೆ ಆದಷ್ಟು ಬೇಗ ಸರಕಾರ ಸ್ಪಂದಿಸಿ ಒಳ್ಳೆಯ ಪರಿಹಾರ ನೀಡುತ್ತದೆ ಎಂದು ನಂಬಿದ್ದೇನೆ ಎಂದಿದ್ದಾರೆ. ಹೀಗಾಗಿ ಈ ಹೋರಾಟಕ್ಕೆ ಇದೀಗ ಆನೆ ಬಲ ಬಂದಂತಾಗಿದೆ.


ವಾಲ್ಮೀಕಿ ಸಮುದಾಯಕ್ಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಇತ್ತೀಚೆಗಷ್ಟೇ ದಾವಣಗೆರೆಯಲ್ಲಿ  ಪಾದಯಾತ್ರೆ ಆರಂಭವಾಗಿತ್ತು. ಇದು ಮಂಗಳವಾರ ಅಷ್ಟೇ ಬೆಂಗಳೂರಿಗೆ ಬಂದು ತಲುಪಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಾಧೆಯುತ್ತಿದ್ದು, ಸಿಎಂ ಸ್ಥಳಕ್ಕೆ ಆಗಮಿಸಬೇಕು ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ. 


మరింత సమాచారం తెలుసుకోండి: