ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆ ನಡೆಯುವ ಮುನ್ಸೂಚನೆ ಕಂಡು ಬರುತ್ತಿದೆ. ಹೌದು, ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದ ಸುಮಾರು 8 ಕ್ಕಿಂತ ಹೆಚ್ಚು ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಅದ್ಯಾವಾಗ ಬೀಳುತ್ತೋ ಗೊತ್ತಿಲ್ಲ.

ಹೌದು, ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ ಮೈತ್ರಿ ಸರ್ಕಾರದ ವಿರುದ್ಧ ಅತೃಪ್ತಿ ಹೊಂದಿದ್ದ 8 ಕ್ಕಿಂತ ಹೆಚ್ಚು ಅತೃಪ್ತ ಶಾಸಕರು ಇಂದು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಇದರಲ್ಲಿ ಇನ್ನೊಂದು ವಿಶೇಷ ಏನಪ್ಪ ಅಂದರೆ, ಬಂಡಾಯಗಾರರ ಪಟ್ಟಿಯಲ್ಲಿ ಬೆಂಗಳೂರಿನ ಐವರು ಶಾಸಕರ ಹೆಸರಿದೆ ಎನ್ನಲಾಗುತ್ತಿದೆ. 


ಮತ್ತೊಂದು ಕಡೆ ರಾಜೀನಾಮೆ ಕೊಡಬಹುದಾದ ಶಾಸಕರ ಹೆಸರುಗಳ ಪಟ್ಟಿ ಹೀಗಿದೆ ನೋಡಿ.ಬಿಸಿ ಪಾಟೀಲ್, ರಮೇಶ್ ಜಾರಕಿಹೊಳಿ, ಎಚ್.ವಿಶ್ವನಾಥ್ ಹಾಗೂ ಗೋಪಾಲಯ್ಯ ಮತ್ತು ಶಿವರಾಮ್ ಹೆಬ್ಬಾರ್. ಇವರಿಷ್ಟೇ ಅಲ್ಲದೇ, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ, ಹಾಗೂ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಮಹೇಶ್ ಕುಮಟಳ್ಳಿ ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಗೆ ಆಗಮಿಸಿದ್ದಾರೆ. ಈ ಎಲ್ಲ ಅತೃಪ್ತ ಶಾಸಕರು ಇಂದು ರಾಜಿನಾಮೆ ನೀಡುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.


మరింత సమాచారం తెలుసుకోండి: