ವಿಧಾನಸಭೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಒಟ್ಟು 16 ಅತೃಪ್ತ ಶಾಸಕರ ಸದಸ್ಯತ್ವವನ್ನು ರದ್ದು ಮಾಡಬೇಕು ಎನ್ನುವ ತೀರ್ಪನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಕಾಯ್ದಿರಿಸಿದ್ದಾರೆ. ಶಾಸಕರನ್ನು ಅನರ್ಹ ಮಾಡಬೇಕು ಎಂದು ಶಾಸಕಾಂಗ ಪಕ್ಷದ ಮುಖ್ಯಸ್ಥ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿಸಿದ್ದರು. 


ದಿನೇಶ್ ಗುಂಡೂರಾವ್ ಅವರು ಸೇರಿದಂತೆ, 8 ಅರ್ಜಿಗಳ ವಿಚಾರಣೆಯನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಮಂಗಳವಾರ ಕೈಗೆತ್ತಿಕೊಂಡರು. ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ಶಾಸಕರಿಗೆ ನೀಟಿಸ್ ನೀಡಿದ್ದಾರೆ. ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ಶಾಸಕರು ಸ್ಪೀಕರ್ ಅವರಿಗೆ ಮನವಿ ಮಾಡಿಕೊಂಡರು. 


ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಅವರು ವಾದ ಮಂಡಿಸಿದರು. ಶಾಸಕರ ಪರವಾಗಿ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ತಂಡದ ಆರು ವಕೀಲರು ಪ್ರತಿವಾದ ಮಾಡಿದರು. ವಿಚಾರಣೆ ವೇಳೆ ಶಾಸಕರು ರಾಜೀನಾಮೆ ನೀಡಿದ ಬಳಿಕ, ಅವರ ಮೇಲೆ ಒತ್ತಡ ಹೇರಲು ವಿಪ್ ಜಾರಿ ಮಾಡಲಾಗಿದೆ ಎಂದು ಶಾಸಕರ ಪರ ವಕೀಲರು ಪ್ರತಿವಾದ ಮಂಡಿಸಿದರು.


మరింత సమాచారం తెలుసుకోండి: