ಬೆಂಗಳೂರು/ನವದೆಹಲಿ: ಅಕ್ಟೋಬರ್ 21 ರಂದು ಅನರ್ಹ ಶಾಸಕರ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸಲಾಗುವುದು ಅಂತ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಬಿಸಿ ಬಿಸಿಯಾಗಿ ಚರ್ಚೆಯಾಗುತ್ತಿರುವ ವಿಷಯವಿದು.  ಇಂದು ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ವಿಧಾನಸಭಾ ಚುನಾವಣಾ ಮಾಹಿತಿಯನ್ನು ತಿಳಿಸಿದರು. ಇದೇ ವೇಳೆ ಚುನಾವಣಾ ಆಯುಕ್ತರು ಮಾತನಾಡಿ ಸೆ.23ರಂದು ಉಪಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. 


ಚುನಾವಣಾ ನಾಮಪತ್ರ ಸಲ್ಲಿಕೆಗೆ ಸೆ.30 ಕೊನೇ ದಿನ. ನಾಮಪತ್ರ ಪರಿಶೀಲನೆ ಅಕ್ಟೋಬರ್​ 1 ಕ್ಕೆ ನಡೆಯಲಿದೆ. ಸಲ್ಲಿಸಿರುವ ನಾಮಪತ್ರ ವಾಪಸು ಪಡೆಯಲು ಅಕ್ಟೋಬರ್​ 3 ಕೊನೇ ದಿನವಾಗಿದೆ. ಅಕ್ಟೋಬರ್​ 21ಕ್ಕೆ ಮತದಾನ ನಡೆಯಲಿದ್ದು, ಅಕ್ಟೋಬರ್​ 23ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. 


ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳು ಯಾವುವು? 

ಗೋಕಾಕ್, ಅಥಣಿ, ಕಾಗವಾಡ, ಹಿರೆಕೆರೂರು, ಯಲ್ಲಾಪುರ, ಯಶವಂತಪುರ್,ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆಆರ್ ಪೇಟೆ, ಮಹಾಲಕ್ಷ್ಮಿ ಲೇಔಟ್, ಕೆಆರ್ ಪುರ, ರಾಣೇಬೆನ್ನೂರು, ಚಿಕ್ಕಬಳ್ಳಾಪುರದಲ್ಲಿ ಉಪಚುನಾವಣೆ ನಡೆದರೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ರಾಯಚೂರಿನ ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುದಿಲ್ಲ.


ಏಕೆ ಗೊತ್ತಾ ಈ ಉಪಚುನಾವಣೆ:- ಕಳೆದ ಒಂದುವರೆ ತಿಂಗಳ ಹಿಂದೆ ರಾಜ್ಯ ಸಮ್ಮಿಶ್ರ ಸರ್ಕಾರ ಉರುಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ 17 ಶಾಸಕರು ರಾಜೀನಾಮೆ ನೀಡಿದ್ದರು. ಪಕ್ಷಗಳಿಂದ ಇವರಿಗೆ ವಿಪ್ ಅನ್ವಯಿಸುತ್ತದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹತೆಗೊಳಿಸಿದ್ದರು. ಇದನ್ನು ಪ್ರಶ್ನಿಸಿದ ಅನರ್ಹ ಶಾಸಕರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣ ಪ್ರಸ್ತುತ ಈಗಲೂ ಸುಪ್ರಿಂ ಕೋರ್ಟ್ ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಆ

ದ್ದರಿಂದ ಪ್ರಸ್ತುತ ರಾಜೀನಾಮೆ ನೀಡಿದ ಶಾಸಕರ ಕ್ಷೇತ್ರಗಳಲ್ಲಿ ರಾಜ್ಯ ವಿಧಾನಸಭಾ ಉಪಚುನಾವಣೆ ಎದುರಾಗಿದೆ. ಈ ಕ್ಷೇತ್ರಗಳಲ್ಲಿ ಯಾವ ಪಕ್ಷದ ನಾಯಕರು ಗೆಲ್ಲುತ್ತಾರೆಂಬುದು ಪ್ರಸ್ತುತ ಕುತೂಹಲಕಾರಿ ಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ಚುನಾವಣಾ ಗೆ ಭರ್ಜರಿ ಪೂರ್ವತಯಾರಿ ನಡೆಸಿವೆ. 


మరింత సమాచారం తెలుసుకోండి: