ಬೆಂಗಳೂರು: ಇತ್ತೀಚೆಗಷ್ಟೇ ಹೈದರಾಬಾದ್‌ ಕರ್ನಾಟಕಕ್ಕೆ 'ಕಲ್ಯಾಣ ಕರ್ನಾಟಕ' ಎಂದು ಮರುನಾಮಕರಣ ಮಾಡಲಾಗಿದೆ. ಇದೀಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರೀಯಾಯೋಜನೆ ಯೋಜಿಸಲಾಗಿದ್ದು, ಈ ಕ್ರಿಯಾಯೋಜನೆಗೆ ಅನುಮೋದನೆಯೂ ದೊರೆತಿದೆ.


ಕಲಬುರಗಿ ಜಿಲ್ಲಾ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಯೋಜನೆಯಡಿ 254 ಕೋಟಿ ರೂ. ಹಾಗು ಮ್ಯಾಕ್ರೋ ಯೋಜನೆಯಡಿ 109 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಗುಲ್ಬಾರ್ಗ ಜಿಲ್ಲಾ ಸಲಹಾ ಸಮಿತಿಯು (ಕೆಕೆಆರ್ ಡಿಬಿ) ಅನುಮೋದನೆ ನೀಡಿರುವ ಸುದ್ದಿ ಬಂದಿದೆ. 


ವಿಕಾಸ ಸೌಧದಲ್ಲಿ  ಗುಲ್ಬರ್ಗಾ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ. ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯು ಮೈಕ್ರೋ ಯೋಜನೆಯಡಿ ಸಾಮಾಜಿಕ ವಲಯಕ್ಕೆ 100 ಕೋಟಿ ರೂ. ಮತ್ತು ಸಾಮಾಜಿಕೇತರ ವಲಯಕ್ಕೆ 151 ಕೋಟಿ ಹಾಗು ಮ್ಯಾಕ್ರೋ ಯೋಜನೆಯಡಿ ಸಾಮಾಜಿಕ ವಲಯಕ್ಕೆ 54 ಕೋಟಿ ಮತ್ತು ಸಾಮಾಜಿಕೇತರ ವಲಯಕ್ಕೆ 54 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.


'ಕಲ್ಯಾಣ ಕರ್ನಾಟಕ ಉತ್ಸವ' ಕಲಬುರಗಿಯಲ್ಲಿ ಬಿಎಸ್‌ವೈ ಧ್ವಜಾರೋಹಣ ನೆರವೇರಿಸಿದ್ದಾರೆ. ಡಾ. ನಂಜುಂಡಪ್ಪ ವರದಿಯ ಆಧಾರದಡಿ ಈ ಪ್ರದೇಶದ ಅಭಿವೃದ್ಧಿಗಾಗಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಮಂಡಳಿಯ ವ್ಯಾಪ್ತಿಯಲ್ಲಿ ಒಟ್ಟು 41 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತಿವೆ. 1500 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ನಿಯಮಾನುಸಾರ ಈ ಯೋಜನೆಯಡಿ ಬೃಹತ್ ಯೋಜನೆಗಳಾಗಿದ್ದರೂ 3 ವರ್ಷಗಳೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ವಿಳಂಬ ಮಾಡದೇ ಎಲ್ಲಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. 


ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಹೊಸತಾಲೂಕುಗಳಲ್ಲಿ ಮಿನಿವಿಧಾನಸೌಧ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು. ಮಂಡಳಿಗೆ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಿ ತಾಂತ್ರಿಕವಾಗಿ ಸದೃಡಗೊಳಿಸಲಾಗುವುದು. ಕಾಮಗಾರಿಗಳ ಗುಣಮಟ್ಟವನ್ನು ಮೌಲ್ಯಮಾಪನ ಮಾಡಲಾಗುವುದು. ಈ ಪ್ರದೇಶದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಡಿ ಸಿ ಎಂ ಶ್ರೀ ಗೋವಿಂದ ಎಂ. ಕಾರಜೋಳ ಅವರು ತಿಳಿಸಿದರು.


మరింత సమాచారం తెలుసుకోండి: